Advertisement
ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸಿದ್ಧತೆಯ ವಿವರ ನೀಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ ಹಾಸನ ಕ್ಷೇತ್ರದಲ್ಲಿ 16,29,587 ಲಕ್ಷ ಮತದಾರರಿದ್ದು, ಇನ್ನೂ 20 ಸಾವಿರ ಮತದಾರರು ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆ. ಮತದಾರರು ನೋಂದಾಯಿಸಿಕೊಳ್ಳಲು ಮಾ.26ರ ವರೆಗೂ ಕಾಲಾವಕಾಶವಿದೆ ಎಂದು ಹೇಳಿದರು.
Related Articles
Advertisement
ಹೊಸ ಕಾಮಗಾರಿ ಘೋಷಿಸುವಂತಿಲ್ಲ: ಪ್ರಸ್ತುತ ಪ್ರಗತಿಯಲ್ಲಿ ಇರುವ ಕಾಮಗಾರಿ ಹೊರತುಪಡಿಸಿದರೆ ಹೊಸ ಯೋಜನೆ ಘೋಷಿಸುವಂತಿಲ್ಲ. ಹಾಗೂ ಹೊಸ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತಿಲ್ಲ. ಆದರೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ಪಡೆದಿರುವ ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಮುಂದುವರಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದೂರು ಸಲ್ಲಿಸಲು ಅವಕಾಶ: ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್ ಮೂಲಕವೂ ದೂರುಗಳನ್ನು ದಾಖ ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸುವಿಧಾ ವೆಬ್ ಸೈಟ್ ಆರಂಭ: ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಮಾಡಲು ಆಯಾ ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿಯೇ ಏಕಗವಾಕ್ಷಿ ಮಾದರಿಯಲ್ಲಿ ಅನುಮತಿ ಪಡೆದುಕೊಳ್ಳಲು ಸುವಿಧಾ ಎಂಬ ವೆಬ್‌ಸೈಟ್ ತೆರೆಯಲಾಗಿದ್ದು,
ಅಲ್ಲಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ, ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ವಾಹನ ಬಳಕೆ ಹಾಗೂ ಹೆಲಿಕಾಫ್ಟರ್ ಲ್ಯಾಂಡಿಂಗ್ ಅನುಮತಿಯನ್ನು ಚುನಾವಣಾಧಿಕಾರಿಗಳ ಹಂತದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಎಸ್ಪಿ ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ವೈಶಾಲಿ ಅವರೂ ಉಪಸ್ಥಿತರಿದ್ದರು.