Advertisement

ಮೊದಲನೇ ಸುತ್ತಿನ ಪೋಲಿಯೋ ಕಾರ್ಯಕ್ರಮಕ್ಕೆ ಸಿದ್ಧತೆ

12:33 PM Feb 26, 2017 | Team Udayavani |

ಮೈಸೂರು: ಮಕ್ಕಳಲ್ಲಿ ಹರಡುವ ಪೋಲಿಯೋ ರೋಗವನ್ನು ನಿರ್ಮೂಲನೆ ಮಾಡುವ ಸಲುವಾಗಿ ಏಪ್ರಿಲ್‌ 2ರಂದು ಜಿಲ್ಲೆಯಾದ್ಯಂತ ಮೊದಲನೇ ಸುತ್ತಿನ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಿ. ರಂದೀಪ್‌ ತಿಳಿಸಿದರು.

Advertisement

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ ತಿಂಗಳಲ್ಲಿ ಶಾಲೆಗಳಿಗೆ ರಜೆಯಿದ್ದು, ಮೈಸೂರು ಜಿಲ್ಲೆಗೆ ಹೆಚ್ಚಿನ ಪ್ರವಾಸಿ ಗರು ಭೇಟಿ ನೀಡಲಿದ್ದಾರೆ. ಹೀಗಾಗಿ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ಆರೋಗ್ಯ ಕೇಂದ್ರಗಳ ಜತೆಗೆ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಾಗಿ ನಡೆಸಬೇಕು.

ಜತೆಗೆ ಜಿಲ್ಲೆಯಲ್ಲಿ ಎಲ್ಲಾ ಗ್ರಾಮಗಳು, ಹಾಡಿಗಳ, ವಲಸಿಗರು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಲು ಕ್ರಮಕೈಗೊಳ್ಳಬೇಕು. ಪಲ್ಸ್‌ ಪೋಲಿಯೋ, ದಡಾರ ಮತ್ತು ರುಬೆಲ್ಲಾ ಕಾಯಿಲೆಗಳು ಮಕ್ಕಳಲ್ಲಿ ಬರದಂತೆ ತಡೆಗಟ್ಟಲು ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಈ ವೇಳೆ ಶಾಲೆಗಳು, ಅಂಗನವಾಡಿಗಳು ಹಾಗೂ ಪ್ಲೇ ಹೋಂ ಮಕ್ಕಳಿಗೆ ಲಸಿಕೆ ಹಾಕಬೇಕು ಎಂದರು.

ಆರೋಗ್ಯ ಇಲಾಖೆ ಅಧಿಕಾರಿ ಡಾ. ಗೋಪಿನಾಥ್‌ ಮಾತನಾಡಿ, ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಲಸಿಕೆಗಳನ್ನು ಅತ್ಯಂತ ಸುರಕ್ಷಿತವಾಗಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಪೋಲಿಯೋ ಲಸಿಕೆ ಸಂದ¸‌ìದಲ್ಲಿ ನಿರಂತರವಾಗಿ ವಿದ್ಯುತ್‌ ಒದಗಿಸುವಂತೆ ಚೆಸ್ಕಾಂ ಇಲಾಖೆಗೆ ಪತ್ರ ಬರೆಯಲಾಗುವುದು. ಜಿಲ್ಲೆಯಲ್ಲಿ ಒಟ್ಟು 1,588 ಲಸಿಕಾ ಕೇಂದ್ರಗಳಲ್ಲಿ 2,98,694 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿಯೊಂದಿಗೆ ಪಲ್ಸ್‌ ಪೋಲಿಯೋ ಯೋಜನೆಯನ್ನು ರೂಪಿಸಲಾಗಿದೆ.

ಏಪ್ರಿಲ್‌ 2 ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ನಂತರ ಎರಡು ದಿನಗಳು ಮನೆ ಮನೆಗೆ ಬೇಟಿ ಮಾಡಿ ಲಸಿಕೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ 6,352 ಲಸಿಕೆ ನೀಡುವವರು ಹಾಗೂ 320 ಮೇಲ್ವಿಚಾರಕಿಯರನ್ನು ನಿಯೋಜಿಸ ಲಾಗಿದೆ. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಬಸ್‌ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣ, ಪ್ರವಾಸಿ ಸ್ಥಳಗಳಲ್ಲಿ ಸಹ ಲಸಿಕಾ ಕೇಂದ್ರಗಳನ್ನು ತೆರೆದು ಸಂಚಾರದಲ್ಲಿರುವ ಮಕ್ಕಳಿಗೂ ಸಹ ಲಸಿಕೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಸಬೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಿವಶಂಕರ್‌, ಡಿಎಚ್‌ಒ ಡಾ. ಬಸವರಾಜು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next