ಪಾಂಡವಪುರ: ಆ.15ರಂದು ನಡೆಯಲಿರುವ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ತಪ್ಪದೆ ಹಾಜ ರಾಗಿ ವಿಜೃಂಭಣೆಯಿಂದ ಆಚರಿಸಲು ಸಹಕರಿಸಬೇಕೆಂದು ಉಪ ವಿಭಾಗಾಧಿ ಕಾರಿ ವಿ.ಆರ್.ಶೈಲಜಾ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ ತಮ್ಮ ಕಚೇರಿಗಳಲ್ಲಿ ರಾಷ್ಟ್ರ ಧ್ವಜ ಹಾರಿಸಿದ ಬಳಿಕ ಪಾಂಡವ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ಭಾಗವಹಿಸಬೇಕು. ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡುವ ಸ್ತಬ್ಧಚಿತ್ರ ನಿರ್ಮಿಸ ಬೇಕು. ಜತೆಗೆ ವಿಶೇಷ ವಾಗಿ ಇತ್ತೀಚೆಗೆ ಚಂದ್ರಯಾನ ನಡೆಸಿದ ಸ್ತಬ್ಧಚಿತ್ರ ನಿರ್ಮಿಸು ವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಯಿತು. 2018-19ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ,ವಿವಿಧ ಕ್ಷೇತ್ರಗಳ ಗಣ್ಯರು, ಪೌರಕಾರ್ಮಿಕರನ್ನು ಸನ್ಮಾನಿಸಲು ತೀರ್ಮಾನಿಸ ಲಾಯಿತು.ಬೆಳಗ್ಗೆ 8ಕ್ಕೆ ಮಿನಿ ವಿಧಾನಸೌಧದಲ್ಲಿ ಧ್ವಜಾರೋಹಣ ನೆರವೇರಿಸಿದ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮೆರವಣಿಗೆ ಮೂಲಕ ಪಾಂಡವ ಕ್ರೀಡಾಂಗಣಕ್ಕೆ ತೆರಳಲಾಗುವುದೆಂದರು.