Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಆರಂಭಕ್ಕೆ ಸಿದ್ಧತೆ

03:56 PM Aug 19, 2021 | Team Udayavani |

ಚಿಕ್ಕಬಳ್ಳಾಪುರ: ಕೋವಿಡ್‌ ಸೋಂಕು ನಿಯಂತ್ರಣಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ ಪಾಲಿಸುವ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮತ್ತೊಂದೆಡೆ ಜಿಲ್ಲೆಯಲ್ಲಿ 9ರಿಂದ 10ನೇ ತರಗತಿಗಳನ್ನು ಆರಂಭಿಸಲು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು ಅದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ
ಮಾಡಿಕೊಳ್ಳುತ್ತಿದೆ.

Advertisement

ತಾಂತ್ರಿಕ ದೋಷ: ಕೋವಿಡ್‌ ಸೋಂಕಿನ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಳಿಸಲಾಗಿದೆ. ಆದರೆ, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಆನ್‌ಲೈನ್‌ ಮೂಲಕ ತರಗತಿ ನಡೆಸಲಾಗುತ್ತಿದ್ದು ಅದರಲ್ಲಿ ತಾಂತ್ರಿಕ ದೋಷದ ದೂರು ಕೇಳಿ ಬರುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪಾಠ, ಪ್ರವಚನ ಕೇಳುತ್ತಿರುವುದರಿಂದ ವಿದ್ಯಾರ್ಥಿಗಳ ಕಣ್ಣಿನ ಮೇಲೆ
ಪ್ರಭಾವ ಬೀರುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಕಾಲೇಜು ಆರಂಭಿಸಲು ಪ್ರತ್ಯೇಕವಾಗಿ ಕೋವಿಡ್‌ ಮಾರ್ಗಸೂಚಿ ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಆರೋಗ್ಯ ರಕ್ಷಿಸುವ ವಿಚಾರದಲ್ಲಿ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಮಕ್ಕಳ ಕಲಿಕೆಗೆ ಪೂರಕವಾಗಿರುವ ವಾತಾವರಣ ನಿರ್ಮಿಸ ಬೇಕೆಂದು ತಾಕೀತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಡಾ.ಕೆ.ಸುಧಾಕರ್‌ ತಜ್ಞರ ಅಭಿಪ್ರಾಯ ಪಡೆದು ಆ.23 ರಿಂದ9 ಹಾಗೂ 10 ನೇ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ:126 ನೇ ಚಿತ್ರದ ಸಿದ್ಧತೆ ಜೋರು : ಬೆಳ್ಳಂಬೆಳಗ್ಗೆ ಶಿವಣ್ಣನನ್ನು ಭೇಟಿಯಾದ ರಿಷಬ್  

ಅದರಂತೆಯೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳಬಾರದು ಪ್ರತಿ ವಿದ್ಯಾರ್ಥಿಯ ಆರೋಗ್ಯ ಕಾಪಾಡಲು ಸೂಕ್ತಕ್ರಮ ಜರುಗಿಸಿ ಶಾಲೆ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

Advertisement

ವಿದ್ಯಾರ್ಥಿಗಳ ತಂಡ ರಚಿಸಲು ಸೂಚನೆ: ಕೋವಿಡ್‌ ನಿಯಂತ್ರಿಸಲು ಈಗಾಗಲೇ ಕಠಿಣ ಕ್ರಮ ಜರುಗಿಸಿರುವ ಸರ್ಕಾರ, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಸ್ಪಷ್ಟ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬ್ಯಾಚ್‌ ಮಾಡಿಕೊಂಡು ಪಾಠ ಪ್ರವಚನ ಮಾಡಬೇಕೆಂದು ಸರ್ಕಾರ ತಾಕೀತು ಮಾಡಿದೆ. ಹೀಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಆಯುಕ್ತರ ಆದೇಶ: ಮುಂಬರುವ ಆ.23 ರಿಂದ 9 ಮತ್ತು 10ನೇ ತರಗತಿಗಳನ್ನು ಕೋವಿಡ್‌ ಮಾರ್ಗಸೂಚಿ ಪಾಲಿಸಿ. ಮಕ್ಕಳ ಸಂಖ್ಯೆ ಹೆಚ್ಚಾಗಿದ್ದರೆ ತಂಡ ಮಾಡಿಕೊಂಡು ಪಾಠ ಪ್ರವಚನ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಡಿಡಿಪಿಐ ಸಭೆ: ಜಿಲ್ಲೆಯಲ್ಲಿ 9 ಹಾಗೂ 10ನೇ ತರಗತಿ ಆರಂಭಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯರಾಮ ರೆಡ್ಡಿ, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿ ಶಾಲೆ ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಅನುಮತಿ ಪತ್ರ ಕಡ್ಡಾಯ
ಶಾಲೆ ಆರಂಭವಾಗುವ ಮುನ್ನ ಸ್ವತ್ಛತಾಕಾರ್ಯನಡೆಸಿ ಕೊಠಡಿಗಳನ್ನು ಸ್ಯಾನಿಟೆ„ಸ್‌ ಮಾಡಬೇಕು,ಶಾಲಾ ಸ್ವತ್ಛತೆ ಕಾರ್ಯಗಳಿಗೆ ಮಕ್ಕಳನ್ನು
ಬಳಸಿಕೊಳ್ಳಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜತೆಗೆ ಶಾಲೆಗೆ ಬರುವ ವಿದ್ಯಾರ್ಥಿಗಳುಕಡ್ಡಾಯವಾಗಿ ಪೋಷಕರಿಂದ
ಅನುಮತಿಪತ್ರ ಪಡೆದುಕೊಳ್ಳಲು ಕಡ್ಡಾಯಗೊಳಿಸಲಾಗಿದೆ. ಆದರೇ ವಿದ್ಯಾರ್ಥಿಗಳುಕಡ್ಡಾಯವಾಗಿ ಶಾಲೆಗೆ ಹಾಜರಾಗಲು ನಿರ್ದೇಶನ ನೀಡಿಲ್ಲ. ಶಾಲೆಗೆ ಬರಲು ಅಥವಾ ಬಾರದಿರಲು ಪೋಷಕರು, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ.

ಹಾಜರಾತಿ ಕಡ್ಡಾಯವಿಲ್ಲ
ಮಕ್ಕಳು ಕಲಿಕೆಯಲ್ಲಿ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಸರ್ಕಾರ ಮಾರ್ಗಸೂಚಿ ಜಾರಿಗೊಳಿಸುವ ಜತೆಗೆ ಬೋಧನೆ
ಮಾಡುವ ಶಿಕ್ಷಕರು ಸೇರಿದಂತೆ ಸಿಬ್ಬಂದಿ ಕೋವಿಡ್‌ ಲಸಿಕೆ ಪಡೆದುಕೊಂಡಿರಬೇಕು. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ
ಪಾಲಿಸಲು ವಿಶೇಷ ಜಾಗೃತಿ ವಹಿಸಬೇಕೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಪೂರ್ವ ಸಿದ್ಧತೆ ಮಾಡಿಕೊಳ್ಳಲು ನಿರ್ದೇಶನ ನೀಡಲಾಗಿದೆ. ಕೋವಿಡ್‌-19
ಮಾರ್ಗಸೂಚಿ ಪಾಲಿಸಿ ಶಾಲೆ ಆರಂಭಿಸಲು ಕ್ರಮಕೈಗೊಳ್ಳಲಾಗಿದೆ.
– ಜಯರಾಮ್‌ರೆಡ್ಡಿ, ಡಿಡಿಪಿಐ ಸಾರ್ವಜನಿಕ
ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ.

-ಎಂ.ಎ.ತಮೀಮ್‌ ಪಾಷ

Advertisement

Udayavani is now on Telegram. Click here to join our channel and stay updated with the latest news.

Next