Advertisement
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲಾಗುವುದು ಮತ್ತು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ ಮತ್ತು ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಯಾನಿಟೈಸೇಷನ್, ಮಾಸ್ಕ್ ಕಡ್ಡಾಯವಾಗಿ ಧರಿಸಿಕೊಳ್ಳುವುದರ ಮೂಲಕ ಗಣರಾಜ್ಯೋತ್ಸವ ಆಚರಿಸಬೇಕು ಎಂದು ತಿಳಿಸಿದರು.
Related Articles
Advertisement
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ವಯ ಗಣರಾಜ್ಯೋತ್ಸವವನ್ನು ಆಚರಿಸುವಂತೆ ಸೂಚಿಸಿದರು, ಜಿಲ್ಲೆಯ ಎಲ್ಲಾ ಪ್ರಮುಖ ವೃತ್ತಗಳಲ್ಲಿ, ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು ಮತ್ತು ಅಂದು ವಿವಿಧ ದೇವಸ್ಥಾನಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ, ಪಾರ್ಥನೆ ಮಾಡಲು ಸೂಚಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ರಮೇಶ್ ಕೊನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಚ್.ಎಲ್. ಜನಾರ್ದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.