Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸೆ. 17ರಂದು ಬೆಳಗ್ಗೆ 7ರಿಂದ 8:00 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಧ್ವಜಾರೋಹಣ ನೆರವೇರಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಆಚರಣೆ ಮಾಡಬೇಕು ಎಂದು ಸೂಚಿಸಿದರು.
Related Articles
Advertisement
ಸಮಾರಂಭದ ವೇದಿಕೆಗೆ ಟೆಂಟ್, ಆಸನ, ಮೈಕ್, ವಿದ್ಯುತ್, ಸೌಂಡ್ ಸಿಸ್ಟಮ್, ಶಾಮಿಯಾನ, ಜನರೇಟರ್, ಬ್ಯಾಕ್ ಡ್ರಾಪ್ ವ್ಯವಸ್ಥೆ, ಜಿಲ್ಲಾಡಳಿತ ಕಾರ್ಯಾಲಯ, ಎಲ್ಲಾ ಸರಕಾರಿ ಕಚೇರಿ ಹಾಗೂ ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ, ನಗರ ಸ್ವಚ್ಛತೆಗೆ ಕ್ರಮ ವಹಿಸಬೇಕು. ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ ವಾಹನ ಹಾಗೂ ಕಾಲೇಜು ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ಅಂದು ಬೆಳಗ್ಗೆ 5:00 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮೇಲುಸ್ತುವಾರಿ ಕಾರ್ಯವನ್ನು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಮತ್ತು ಗಣ್ಯರಿಗೆ ನೀರಿನ ವ್ಯವಸ್ಥೆ ಮಾಡಲು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರ್‌ಸಿಂಗ್ ಠಾಕೂರ್ ಸಭೆ ನಡವಳಿಗಳನ್ನು ಓದಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಪಂಚಾಯಿತಿ ಅಧಿಕಾರಿ ಗುರುನಾಥ ಎನ್.ಗೌಡಪ್ಪನವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ್, ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸ್ಕೌಟ್ಸ್ ಅಂಡ್ ಗೈಡ್ಸ್ ರಾಘವೇಂದ್ರ, ಸಾಹಿತಿ ಅಯ್ಯಣ್ಣ ಹುಂಡೇಕಾರ, ಜಿಲ್ಲಾ ಭಾವೈಕ್ಯತಾ ಸಮಿತಿಯ ಬಾಬು ದೋಖಾ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭೀಮುನಾಯಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.