Advertisement

ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸಿದ್ಧತೆ

12:23 PM Apr 30, 2020 | mahesh |

ಬೆಂಗಳೂರು: ವಿದೇಶಗಳಲ್ಲಿ ಸಿಲುಕಿರುವ ರಾಜ್ಯದ 10,823 ಮಂದಿಯನ್ನು ಕರೆತರಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದ್ದು ಮೊದಲ ಹಂತದಲ್ಲಿ 6,100 ಮಂದಿ ಆಗಮಿಸಲಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೇಂದ್ರ ಸರಕಾರ ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಕ್ರಮಕೈಗೊಂಡಿದೆ. ಈ ಪೈಕಿ 10,823 ಕನ್ನಡಿಗರು ರಾಜ್ಯಕ್ಕೆ ಮರಳಲಿದ್ದು, ಈ ಕುರಿತು ಶೀಘ್ರದಲ್ಲಿಯೇ ದಿನಾಂಕ ನಿಗದಿಯಾಗಲಿದೆ. ವಿದೇಶದಲ್ಲಿರುವ ರಾಜ್ಯದ 10,823 ಮಂದಿ ಪೈಕಿ 4,408 ಮಂದಿ ಪ್ರವಾಸಕ್ಕೆ, 3,074 ಮಂದಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ, 2,784 ಮಂದಿ ವೃತ್ತಿಜೀವನ ಅರಸಿ, 557 ಹಡಗಿನ ಸಿಬಂದಿಯಾಗಿ ವಿದೇಶಕ್ಕೆ ತೆರಳಿದ್ದರು ಎಂದು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ಕೆನಡಾದಿಂದ 328, ಯುಎಸ್‌ಎಯಿಂದ 927, ಯುಎಇ 2,575, ಕತಾರ್‌ – 414, ಸೌದಿ ಅರೇಬಿಯಾದಿಂದ 927 ಮಂದಿಯ ಸಹಿತ 6,100 ಮಂದಿ ಕರೆತರಲು ನಿರ್ಧರಿಸಲಾಗಿದೆ. ಇವರೆಲ್ಲರನ್ನೂ ಸರಕಾರದ ನಿಯಂತ್ರಣದಲ್ಲಿರುವ ಸಂಸ್ಥೆಗಳಲ್ಲಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. 28 ದಿನಗಳ ಪರಿಶೀಲನೆ ಬಳಿಕ ಮತ್ತೂಮ್ಮೆ ಪರೀಕ್ಷೆ ನಡೆಸಿ ಮನೆಗಳಿಗೆ ಕಳುಹಿಸಲು ಕಾರ್ಯಯೋಜನೆ ಸಿದ್ಧಪಡಿಸಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next