Advertisement

ಸಂಸತ್‌ನಲ್ಲಿ 38ಹೊಸ ಬಿಲ್ ಗಳನ್ನು ಮಂಡಿಸಲು ಸಿದ್ಧತೆ: ಸಚಿವ ಜೋಷಿ

09:57 AM Jun 09, 2019 | Vishnu Das |

ಹುಬ್ಬಳ್ಳಿ: ಈ ಬಾರಿಯ ಸಂಸತ್ ಅಧಿವೇಶನದಲ್ಲಿ 38 ಹೊಸ ಬಿಲ್ ಗಳನ್ನು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

Advertisement

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆ, ತ್ರಿವಳಿ ತಲಾಖ್ ನಿಷೇಧ ಸೇರಿದಂತೆ ಪ್ರಮುಖ ಮಸೂದೆಗಳಿಗೆ ವಿಪಕ್ಷಗಳ ಸಹಕಾರದೊಂದಿಗೆ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.

ಸುಗಮ ಕಲಾಪಕ್ಕೆ ಸಹಕರಿಸುವಂತೆ ಕೋರಿ ಈಗಾಗಲೇ ಎಲ್ಲ ವಿಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಿದ್ದೇವೆ ಎಂದು ತಿಳಿಸಿದರು.

ಜಿಂದಾಲ್ ಗೆ ಭೂಮಿ ನೀಡುವ ವಿಷಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದೆ. ಇದರಲ್ಲಿ ಭ್ರಷ್ಟಾಚಾರದ ವಾಸನೆ ಇದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ, ಸರ್ಕಾರ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next