ಶಿರಸಿ : ಫ್ರಾನ್ಸ್ ನಲ್ಲಿ ನಡೆಯುತ್ತಿರುವ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶಿರಸಿಯ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಂಡ್ಮಿಂಟನ್ ಕ್ರೀಡೆಯಲ್ಲಿ ಬಂಗಾರ ಪದಕ ಗೆದ್ದು, ದೇಶದ ಗರಿಮೆಯನ್ನು ಹೆಚ್ಚಿಸಿದ್ದಾಳೆ.
ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಚೀನಾದ ಆಟಗಾರ್ತಿ ವಿರುದ್ಧ 3 ಸೆಟ್ ಗಳಲ್ಲಿ 13/21, 21/12, 21/16 ಅಂತರದಲ್ಲಿ ಮಣಿಸಿ ಬಂಗಾರದ ಪದಕ ಗೆದ್ದಿದ್ದಾಳೆ. ಇವಳು ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಇವಳ ಸಾಧನೆಗೆ ಪಾಲಕರು, ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಶುಭಕೋರಿದ್ದಾರೆ.
ಭಾರತದಲ್ಲಿ ಈಕೆ ರನ್ನರ್ ಅಪ್ ಆಗಿದ್ದಳು. ಅನೇಕ ರಾಜ್ಯ, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲೂ ಗೆದ್ದಿದ್ದಳು.
ಇದನ್ನೂ ಓದಿ : ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ಗೊತ್ತಿದೆ : ಸಿಎಂ ಬೊಮ್ಮಾಯಿ