ಕುಂದಾಪುರ: ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ
ಕೈಜೋಡಿಸಬೇಕು.ಇಂಗುಗುಂಡಿ ರಚನೆ, ತಡೆಕಟ್ಟುಗಳು, ಬೋರ್‌ವೆಲ್ ಮರುಪೂರಣ ಮುಂತಾದ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಈ ಎಲ್ಲ ಕಾರ್ಯಕ್ರಮಗಳು ಜನರ ಸಹಭಾಗಿತ್ವದಲ್ಲಿ ನಡೆದರೆ ಯಶಸ್ವಿಯಾಗಲು ಸಾಧ್ಯ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಬೈಂದೂರು ವಂಡ್ಸೆ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅತ್ರಾಡಿ ಮತ್ತು ದೇವಲ್ಕುಂದ, ಅರಣ್ಯ ಇಲಾಖೆ ಮಾವಿನಗುಳಿ ಮತ್ತು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಇವರ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಶನಿವಾರ ಜರಗಿದ ತಾಲೂಕು ಮಟ್ಟದ ಅರಣ್ಯ ಸಂವರ್ಧನ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷ ಕೆ.ಕೆ. ಕಾಂಚನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಕ್ಲಾಡಿ ಗ್ರಾಪಂ. ಸದಸ್ಯ ರಾಧಾಕೃಷ್ಣ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಟ್‌ಬೇಲೂ¤ರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯೆ ಇಂದಿರಾ ಶೆಟ್ಟಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣ ಪೂಜಾರಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಂಡ್ಸೆ ವಲಯಾಧ್ಯಕ್ಷೆ ನಯನಾ, ವಂಡ್ಸೆ ವಲಯ ಜನಜಾಗƒತಿ ವೇದಿಕೆ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ಮಾಜಿ ವಲಯಾಧ್ಯಕ್ಷೆ ಸುಪ್ರೀತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಬೈಂದೂರು ಯೋಜನಾ ಧಿಕಾರಿ ಶಶಿರೇಖಾ ಪಿ. ಸ್ವಾಗತಿಸಿದರು. ವಂಡ್ಸೆ ವಲಯ ಮೇಲ್ವಿಚಾರಕಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿ ಧಿ ರಾಜ ಎಸ್.ಪಿ. ವಂದಿಸಿದರು.