Advertisement

ಶನಿವಾರ ಮೈಸೂರು ಜಿಲ್ಲೆಗೆ ರಾಷ್ಟ್ರಪತಿ ಆಗಮನ; ಸಕಲ ಸಿದ್ದತೆಗೆ ಡಿಸಿ ಸೂಚನೆ

02:53 PM Aug 04, 2023 | Team Udayavani |

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್ 5 ರಂದು ಮಧ್ಯಾಹ್ನ 12.30 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಮಧುಮಲೈಗೆ ತೆರಳುವರು. ನಂತರ ಸಂಜೆ 5.45 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಅವರು ತಿಳಿಸಿದರು.

Advertisement

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು, ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರೂಮ್ ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕೆಂದರು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು ಎಂದು ಅವರು ತಿಳಿಸಿದರು.

ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next