Advertisement

ಅಧ್ಯಕ್ಷ ಪದವಿ ಮುಂದುವರಿಸಿದ್ರೆ ಮತ್ತೆ ಅಧಿಕಾರಕ್ಕೆ : ಪರಮೇಶ್ವರ್‌

11:04 AM Apr 15, 2017 | Team Udayavani |

ಬೆಂಗಳೂರು:”ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮನ್ನು ಮುಂದುವರೆಸಿದರೆ, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. 

Advertisement

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 126 ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿಯೂ ಪಕ್ಷವನ್ನು ಅಧಿಕಾರದತ್ತ ಮುನ್ನಡೆಸಬೇಕೆಂಬ ಆಸೆ ಇದೆ.

ಈ ಬಾರಿ ಪಕ್ಷವನ್ನು ಚುನಾವಣೆಗೆ ಸಿದ್ಧಪಡಿಸಲು ಮತ್ತು ಅಭ್ಯರ್ಥಿಗಳ ಆಯ್ಕೆ ಪ್ರಕಿಯೆ ಅಷ್ಟೊಂದು ಕಷ್ಟದಾಯಕವಾಗುವುದಿಲ್ಲ ಎಂದರು. 

ಒಂದು ವೇಳೆ ಹೈಕಮಾಂಡ್‌ ಹಾಲಿ ಶಾಸಕರಿಗೆ ಟಿಕೆಟ್‌ ಕೊಡಬೇಕು ಎಂದು ತೀರ್ಮಾನ ಮಾಡಿದರೆ, ಆದಷ್ಟು ಬೇಗ ಹಾಲಿ ಶಾಸಕರಿಗೆ ಟಿಕೆಟ್‌ ಘೋಷಣೆ ಮಾಡಬಹುದು. ಉಳಿದ ನೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸುಲಭವಾಗಲಿದೆ. ಹೈಕಮಾಂಡ್‌ ಯಾವ ಜವಾಬ್ದಾರಿ ನೀಡಿದರೂ ನಿರ್ವಹಿಸುತ್ತೇನೆ. ಇದೊಂದು ಅವಧಿಗೂ ನೀವೇ ಮುಂದುವರೆಯಿರಿ ಎಂದರೆ ಇನ್ನಷ್ಟು ಉತ್ಸಾಹದಿಂದ ಕಾರ್ಯ ನಿರ್ವಹಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಪರಮೇಶ್ವರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next