Advertisement

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

08:56 PM Sep 26, 2022 | Team Udayavani |

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.

Advertisement

ರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಸಂಸದರು ಮತ್ತು ಸಚಿವರು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಭಾರತೀಯ ಸೇನೆಯಿಂದ ಗೌರವ ವಂದನೆ ಸಲ್ಲಿಸಲಾಯಿತು.

ರಾಷ್ಟ್ರಪತಿಗಳನ್ನು ಸ್ವಾಗತಿಸುವ ವೇಳೆ ಸಂಸದರಾದ ಪಿ.ಸಿ. ಮೋಹನ್‌, ಲೆಹರ್‌ ಸಿಂಗ್‌ ಸಿರೋಯಾ, ಸಚಿವರಾದ ವಿ.ಸೋಮಣ್ಣ, ಮುನಿರತ್ನ, ಶಾಸಕರಾದ ಅರವಿಂದ ಲಿಂಬಾವಳಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ.ಶರವಣ, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌, ಬೆಂಗಳೂರು ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ, ಬೆಂ. ನಗರ ಜಿಲ್ಲಾಧಿಕಾರಿ ಶ್ರೀನಿವಾಸ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next