ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
Advertisement
ದೆಹಲಿಯ ಆರ್ಮಿ ಹಾಸ್ಪಿಟಲ್ ರಿಸರ್ಚ್ & ರೆಫರಲ್‌ನಲ್ಲಿ ದ್ರೌಪದಿ ಮುರ್ಮು ಅವರು ಬಲಗಣ್ಣಿನ ಯಶಸ್ವಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಬ್ರಿಗೇಡಿಯರ್ ಎಸ್.ಕೆ. ಮಿಶ್ರಾ ಮತ್ತು ಅವರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ರಾಷ್ಟ್ರಪತಿಯವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ವಿಶ್ರಾಂತಿಗೆ ಸಲಹೆ ನೀಡಲಾಗಿದೆ ಎಂದು ಸೇನಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.