ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
Advertisement
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ದ್ರೌಪದಿ ಮುರ್ಮು(64) ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಈ ವರ್ಷ ಜು.25ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Related Articles
ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Advertisement