ನವದೆಹಲಿ: 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಪ್ರಸ್ತಾಪಕ್ಕೆ ಭಾನುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಇದರ ಜತೆಗೆ ದೇಶಬಿಟ್ಟು ಪರಾರಿಯಾದ ಆರ್ಥಿಕ ಅಪರಾಧಿಗಳ ವಿರುದ್ಧದ ಸುಗ್ರೀವಾಜ್ಞೆ 2018ಕ್ಕೂ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಕಥುವಾ ಮತ್ತು ಉನ್ನಾವ್‌ನಲ್ಲಿ ಅತ್ಯಾ ಚಾರದ ಹಿನ್ನೆಲೆಯಲ್ಲಿ ಅಂಥ ಕೃತ್ಯ ವೆಸಗು ವವರ ವಿರುದ್ಧ ಗಲ್ಲುಶಿಕ್ಷೆಗೆ ಸುಗ್ರಿವಾಜ್ಞೆ ಹೊರಡಿಸಲಾಗಿದ್ದರೆ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ನೀರವ್ ಮೋದಿ, ಮೆಹೂಲ್ ಚೋಸ್ಕಿ 13 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಅಂಥವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ತರ್ತು ಕಾನೂನು ಕ್ರಮ ಕೈಗೊಳ್ಳಲು ಅನುಕೂಲ ವಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿತ್ತು.