ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬ್ರಿಟನ್ ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಭಾರತದ ಪರವಾಗಿ ಸಂತಾಪ ಸೂಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ಪ್ರಕಟಿಸಿದೆ.
ಬ್ರಿಟನ್ ನ ಎರಡನೇ ಎಲಿಜಬೆತ್ ರಾಣಿ 96ನೇ ವಯಸ್ಸಿನಲ್ಲಿ ಸೆಪ್ಟೆಂಬರ್ 8 ರಂದು ನಿಧನರಾದರು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್ , ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಣಿ ಎಲಿಜಬೆತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಭಾರತದ ಸಂತಾಪವನ್ನು ಸೂಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೆಪ್ಟೆಂಬರ್ 12 ರಂದು ಇಲ್ಲಿನ ಬ್ರಿಟಿಷ್ ಹೈಕಮಿಷನ್‌ಗೆ ಭೇಟಿ ನೀಡಿದ್ದರು. ಭಾರತ ಕೂಡ ಭಾನುವಾರ ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಆಚರಿಸಿತು.
ರಾಣಿ ಎಲಿಜಬೆತ್ ಅಂತ್ಯಕ್ರಿಯೆ
ಸೆಪ್ಟೆಂಬರ್ 19 ರಂದು ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.