Advertisement

Panaji ಆ. 22 ರಂದು ಗೋವಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

05:35 PM Aug 16, 2023 | Team Udayavani |

ಪಣಜಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಆ. 22 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.

Advertisement

ದ್ರೌಪದಿ ಮುರ್ಮು ರವರು ಭಾರತದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಗೋವಾದ ಮೊದಲ ಭೇಟಿ ಇದಾಗಿದೆ. ಮೂರು ದಿನಗಳ ಭೇಟಿಯಲ್ಲಿ ರಾಷ್ಟ್ರಪತಿಗಳು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿ ಅವರು ಮುಂದಿನ ವಾರ ಆಗಸ್ಟ್ 22 ರಿಂದ 24 ರವರೆಗೆ ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಲಿದ್ದಾರೆ.

ಆ. 23ರ ಮಂಗಳವಾರ ಗೋವಾ ವಿಶ್ವವಿದ್ಯಾನಿಲಯದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಸಂಜೆ 4 ಗಂಟೆಗೆ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಳೆದ ವರ್ಷ ರಾಷ್ಟ್ರಪತಿ ಚುನಾವಣೆಗೂ ಮುನ್ನ ದ್ರೌಪದಿ ಮುರ್ಮು ರವರು ಗೋವಾಕ್ಕೆ ಭೇಟಿ ನೀಡಿದ್ದರು. ಅಂದು ರಾಜ್ಯದಲ್ಲಿ ಮುಂಗಾರು ಅಧಿವೇಶನ ಆರಂಭವಾಗಿತ್ತು. ಈಗ ಗೋವಾ ಮುಂಗಾರು  ಅಧಿವೇಶನ ಈಗಷ್ಟೇ ಮುಗಿದಿದ್ದು, ಮುರ್ಮು ಮುಂದಿನ ವಾರ ಗೋವಾಕ್ಕೆ ಬರಲಿದ್ದಾರೆ.

Advertisement

ವಿವಿಐಪಿ ಪ್ರವಾಸದಿಂದಾಗಿ ಅಧಿಕಾರಿಗಳ ರಜೆ ರದ್ದಾಗಿದೆ…
ರಾಷ್ಟ್ರಪತಿ ದ್ರೌಪದಿ ಮುರ್ಮು ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳು, ಎಲ್ಲ ಇಲಾಖೆಗಳ ಮುಖ್ಯಸ್ಥರು, ಆಡಳಿತದ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ರಜೆ ರದ್ದುಗೊಳಿಸಲಾಗಿದೆ. ಸಿಬ್ಬಂದಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆ. 24ರವರೆಗೆ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

ರಾಷ್ಟ್ರಪತಿ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧವೂ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next