Advertisement
ನಾಲ್ಕೂವರೆ ವರ್ಷದ ಹಿಂದೆ ಒಕ್ಕಲಿಗರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಮೂರು ವರ್ಷ ಡಾ.ಅಪ್ಪಾಜಿಗೌಡಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ 2017ರ ಜನವರಿಯಲ್ಲಿ ಡಿ.ಎನ್.ಬೆಟ್ಟೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಹಂಗಾಮಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಅಭ್ಯರ್ಥಿಗಳಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅನಗತ್ಯ ಸಿಬ್ಬಂದಿ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ಅಧೀನದಲ್ಲಿರುವ 18 ಸಂಸ್ಥೆಗಳ ನೌಕರರು ಎರಡು ಸುತ್ತಿನ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಿಮ್ಸ್ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಸಂಘದ ಸಂಸ್ಥೆಗಳ ಕಾಯಂ ನೌಕರರಿಗೆ ಸಕಾಲದಲ್ಲಿ ವೇತನ ನೀಡದ ಸ್ಥಿತಿ ಇರುವಾಗ ಅನಗತ್ಯ ಸಿಬ್ಬಂದಿ ನೇಮಕದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಿರ್ದೇಶಕರು ನೌಕರರ ಸಂಘಕ್ಕೆ ಕುಮ್ಮಕ್ಕು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬುದಾಗಿ ಪದಚ್ಯುತ ಅಧ್ಯಕ್ಷ ಬೆಟ್ಟೇಗೌಡ ಕೂಡ ಈ ಹಿಂದೆ ಆರೋಪಿಸಿದ್ದರು.
Related Articles
ಪಡಿಸಬೇಕು. ಆದರೆ 12 ದಿನ ಕಳೆದರೂ ಬೆಟ್ಟೇಗೌಡರು ಸಭೆ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ಎಲ್ಲ 35 ನಿರ್ದೇಶಕರಿಗೆ ನೋಟಿಸ್ ನೀಡಿ ಸೋಮವಾರ ಸಭೆ ಕರೆದಿದ್ದರು.
Advertisement
ಅವಿಶ್ವಾಸದ ಪರ 21 ಮತ: ಶಿವಲಿಂಗಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ 22 ನಿರ್ದೇಶಕರುಪಾಲ್ಗೊಂಡಿದ್ದರು. ಬೆಟ್ಟೇಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವಿಶ್ವಾಸ ನಿರ್ಣಯದ ಪರ 21 ಮತ
ಚಲಾವಣೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ಖಜಾಂಚಿ ಕಾಳೇಗೌಡ ಪದಚ್ಯುತಿಗೊಂಡರು. ಬಳಿಕ ಉಪಾಧ್ಯಕ್ಷರಾದ ಶಿವಲಿಂಗಯ್ಯ, ಪ್ರಸನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಕಾರ್ಯದರ್ಶಿಯನ್ನಾಗಿ ಸಭೆಯಲ್ಲಿ ನೇಮಕ ಮಾಡಲಾಗಿದೆ. ಸಂಘದ ಮೇಲೆ ಆರ್ಥಿಕ ಹೊರೆ ಪದಚ್ಯುತ ಅಧ್ಯಕ್ಷ ಸೇರಿ ಮೂವರು ಪದಾಧಿಕಾರಿಗಳ ವಿರುದ್ಧ ಜು.18ರಂದು ಅವಿಶ್ವಾಸ ನಿರ್ಣಯ ಮಂಡಿಸಿದ್ದೆವು. ಆದರೆ ಸಭೆಯನ್ನೇ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ನೋಟಿಸ್ ನೀಡಿ ನಡೆಸಿದ ಸಭೆಯಲ್ಲಿ ಅವಿಶ್ವಾಸದ ಪರ 21 ಮತ ಚಲಾವಣೆಯಾಗಿವೆ. ಬೆಟ್ಟೇಗೌಡರ ಒಂದೂವರೆ ವರ್ಷದ ಆಡಳಿತಾವಧಿಯಲ್ಲಿ ಅನಗತ್ಯವಾಗಿ 1100 ಸಿಬ್ಬಂದಿ ನೇಮಕವಾಗಿದೆ. ಅನುದಾನ ಕಾಯ್ದಿರಿಸದೆ ಅನಗತ್ಯ ಹುದ್ದೆಗಳನ್ನು ನೇಮಕ ಮಾಡಿ ಸಂಘಕ್ಕೆ ಆರ್ಥಿಕ ಹೊರೆ ತಂದಿದ್ದಾರೆ. ಅತಿಗಣ್ಯರಿಗೆ ನೀಡಿದ್ದ ಸೀಟು ಹಂಚಿಕೆ ಸೇರಿದಂತೆ ಸಂಘದ ನಿರ್ದೇಶಕರ ವಿರುದ್ಧವೂ ಅನಗತ್ಯ ಆರೋಪ ಮಾಡಿ ಸಂಘದ ಘನತೆಗೆ ಚ್ಯುತಿ ತಂದಿದ್ದರು ಎಂದು ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ಹೇಳಿದರು. ನಾನು ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲ. ಆದರೆ ಈ ಹಿಂದೆ ಕೆಲವರು ಸಂಘಕ್ಕೆ 61 ಕೋಟಿ ರೂ. ನಷ್ಟ ಮಾಡಿದ್ದನ್ನು ಬಯಲು ಮಾಡಿದ್ದೆ. ಅದಕ್ಕೆ ಕಾರಣರಾದವರು ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡಿದ್ದು, ಅವರ ಅಕ್ರಮ ಬಯಲು ಮಾಡುವೆ. ಅವರಿಂದಲೇ ನಷ್ಟ ಭರಿಸಲು ಹೋರಾಟ ನಡೆಸುವೆ.
ಡಿ.ಎನ್.ಬೆಟ್ಟೇಗೌಡ, ಪದಚ್ಯುತ ಅಧ್ಯಕ