ಹೊಸದಿಲ್ಲಿ: ಭಾರತದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸದೈವ್ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಕೇಂದ್ರ ಸಚಿವರು ಸದೈವ್ ಅಟಲ್ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಇದನ್ನೂ ಓದಿ:ಇಂದು ಉತ್ತಮ ಆಡಳಿತ ದಿನ: ದೇಶದ ಭವಿಷ್ಯಕ್ಕೆ ಭಾಷ್ಯ ಬರೆದ ಅಟಲ್
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. “ಅವರು ದೇಶವನ್ನು ಅಭೂತಪೂರ್ವ ಅಭಿವೃದ್ಧಿಯ ಎತ್ತರಕ್ಕೆ ಕೊಂಡೊಯ್ದರು. ಬಲವಾದ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.