ಹೊಸದಿಲ್ಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥೀವ ಶರೀರವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಿದ ಅಗಲಿದ ಕೇಂದ್ರ ಸಚಿವರ ಅಂತಿಮ ದರ್ಶನ ಪಡೆದರು.
ಲೋಕ ಜನಶಕ್ತಿ ಪಕ್ಷದ ನೇತಾರ, ಕೇಂದ್ರ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ದಿಲ್ಲಿಯ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಸೆ.11ರಂದು ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಆದರೆ ಬಹು ಅಂಗಾಂಗ ವೈಫಲ್ಯದಿಂದ ಪಾಸ್ವಾನ್ ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿ:ಈಡೇರದೇ ಹೋಯಿತು ತಂದೆಯ ಆಪ್ತ ಕನಸು
ಪಾಸ್ವಾನ್ ಮನೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.