Advertisement

ಸುಪ್ರೀಂಕೋರ್ಟ್ ನೂತನ ಸಿಜೆಐ ಎನ್ ವಿ ರಮಣ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

03:58 PM Apr 06, 2021 | Team Udayavani |

ನವದೆಹಲಿ: ಭಾರತದ ಸರ್ವೋಚ್ಛ ನ್ಯಾಯಾಲಯದ 48ನೇ ಮುಖ್ಯನ್ಯಾಯಮೂರ್ತಿ(ಸಿಜೆಐ)ಯಾಗಿ ಎನ್ ವಿ ರಮಣ ಅವರ ನೇಮಕಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಂಗಳವಾರ(ಏಪ್ರಿಲ್ 6ರಂದು) ಅಂಕಿತ ಹಾಕಿದ್ದಾರೆ.

Advertisement

ಸುಪ್ರೀಂಕೋರ್ಟ್ ನ ಹಾಲಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ ಎ ಬೋಬ್ಡೆ ಅವರು ಏಪ್ರಿಲ್ 23ರಂದು ಸೇವೆಯಿಂದ ನಿವೃತ್ತಿಯಾಗಲಿದ್ದು, ಏಪ್ರಿಲ್ 24ರಂದು ಜಸ್ಟೀಸ್ ಎನ್ ವಿ ರಮಣ ಅವರು ನೂತನ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಜಸ್ಟೀಸ್ ಎನ್ ವಿ ರಮಣ ಅವರ ಹೆಸರನ್ನು ಮುಂದಿನ ನೂತನ ಸಿಜೆಐ ಆಗಿ ನೇಮಕಗೊಳ್ಳಲು ಹಾಲಿ ಸಿಜೆಐ ಎಸ್.ಎ.ಬೋಬ್ಡೆ ಅವರು ಸಂಪ್ರದಾಯದಂತೆ ಶಿಫಾರಸು ಮಾಡಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಆಂಧ್ರಪ್ರದೇಶದ ನೂಥಲಾಪಾಟಿ ವೆಂಕಟ ರಮಣ ಅವರನ್ನು ಸುಪ್ರೀಂಕೋರ್ಟ್ ನ ನೂತನ ಸಿಜೆಐ ಆಗಿ ನೇಮಕ ಮಾಡಲು ಹಸಿರು ನಿಶಾನೆ ತೋರಿಸಿದ್ದಾರೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂ ಎಂಬ ಗ್ರಾಮದಲ್ಲಿ 1957ರ ಆಗಸ್ಟ್ 27ರಂದು ಎನ್.ವಿ.ರಮಣ ಜನಿಸಿದ್ದರು. 1975ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕನಾಗಿದ್ದ ರಮಣ ಅವರು ನಾಗರಿಕ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next