ಹೊಸದಿಲ್ಲಿ : ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ 93ನೇ ಜನ್ಮ ದಿನದ ಶುಭಾಶಯ ಹೇಳಿದರು.
ನಮ್ಮ ಪ್ರೀತಿಯ ಮತ್ತು ಗೌರವಾನ್ವಿತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಕೂಡ tweet ಮಾಡಿ “ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ’ಗಳನ್ನು ತಿಳಿಸಿದೆ.
ವಾಜಪೇಯಿ ಅವರು 1924ರ ಡಿ.25ರಂದು ಮಧ್ಯಪ್ರದೇಶದ ಗ್ವಾಲಿಯರ್ ಅರಸರ ರಾಜ್ಯದಲ್ಲಿ , ಬಡ ಶಾಲಾ ಶಿಕ್ಷಕರ ಕುಟುಂಬದಲ್ಲಿ ಜನಿಸಿದ್ದರು. 1998ರ ಮಾರ್ಚ್ 19ರಿಂದ 2004 ಮೇ 22ರವರೆಗೆ ಮತ್ತು 1996ರಲ್ಲಿ ಕಿರು ಅವಧಿಗೆ ದೇಶದ ಪ್ರಧಾನಿಯಾಗಿ ಅವರು ಸೇವೆ ಸಲ್ಲಿಸಿದ್ದರು.