Advertisement

ರಾಷ್ಟ್ರಪತಿಗಳಿಂದ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅಧಿಕೃತ ನೇಮಕ

10:15 AM Feb 15, 2020 | Hari Prasad |

ನವದೆಹಲಿ: ದೆಹಲಿವಿಧಾನಸಭಾ ಚುನಾವಣೆಗಳಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀದೊಡ್ಡ ಪಕ್ಷವಾಗಿ ಮೂಡಿಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇಂದು ಅಧಿಕೃತವಾಗಿ ನೇಮಿಸಿದ್ದಾರೆ.

Advertisement

ಈ ಮೂಲಕ ಫೆಬ್ರವರಿ 16ರಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ಪ್ರಮಾಣವಚನ ಸ್ವೀಕರಿಸಲು ಹಾದಿ ಸುಗಮವಾದಂತಾಗಿದೆ. ರಾಮ್ ಲೀಲಾ ಮೈದಾನದಲ್ಲಿ ರವಿವಾರದಂದು ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಅರವಿಂದ್ ಕೇಜ್ರಿವಾಲ್ ಜೊತೆ ಆಮ್ ಆದ್ಮಿ ಪಕ್ಷದ ಆರು ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮನೀಷ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೈನ್ ಮತ್ತು ರಾಜೇಂದ್ರ ಗೌತಮ್ ರವಿವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಆಪ್ ಶಾಸಕರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next