Advertisement
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ದೇಶದ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ವರ್ಗ ಕೋವಿಡ್-19 ಸವಾಲಾಗಿ ಸ್ವೀಕರಿಸಿ ದೇಶದ ಜನರ ಜೀವ ಉಳಿಸಿದ್ದಾರೆ. ಕೋವಿಡ್-19 ಇಡೀ ವಿಶ್ವದ ಆರೋಗ್ಯ ಕ್ಷೇತ್ರವನ್ನು ತಲ್ಲಣಗೊಳಿಸಿದೆ. ಭವಿಷ್ಯದಲ್ಲಿ ಇಂತಹ ಸಾಂಕ್ರಾಮಿಕಗಳನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Related Articles
Advertisement
ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇನ್ನು ಮೇಲೆ ನಿಜವಾದ ಶಿಕ್ಷಣ ಆರಂಭವಾಗಲಿದೆ. ಅಧ್ಯಯನ ಹಾಗೂ ಸಂಶೋಧನೆಯ ಜತೆಗೆ ಜ್ಞಾನವನ್ನು ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಉನ್ನತೀಕರಿಸಿಕೊಳ್ಳುತ್ತಾ, ಜನ ಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಕರೆ ನೀಡಿದರು.
ಇದನ್ನೂ ಓದಿ:ಇನ್ಮುಂದೆ ಅಂಚೆ ಕಚೇರಿಯಲ್ಲೂ ಮಾಡಿಸಬಹುದು ಆಧಾರ್ ಕಾರ್ಡ್ ..!
ನರರೋಗ ತಜ್ಞರಾದ ಡಾ. ಅಲಂಗಾರ ಸತ್ಯರಂಜನ್ ದಾಸ್ ಹೆಗ್ಡೆ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ರಾಷ್ಟ್ರಪತಿಯವರು ಪದವಿ ಪ್ರದಾನ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಕುಲಪತಿ ಡಾ.ಎಸ್. ಸಚ್ಚಿದಾನಂದ ಇದ್ದರು.