Advertisement

ಇಂದು ಚಾಮರಾಜನಗರಕ್ಕೆ ರಾಷ್ಟ್ರಪತಿ ಭೇಟಿ

04:30 PM Oct 07, 2021 | Team Udayavani |

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಗುರುವಾರ ನಗರ ಹಾಗೂ ಜಿಲ್ಲೆಯ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಗುರುವಾರ ಮಧ್ಯಾಹ್ನ 12ಕ್ಕೆ ಬಿಳಿಗಿರಿರಂಗನಬೆಟ್ಟಕ್ಕೆ ಖಾಸಗಿ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಮಧ್ಯಾಹ್ನ3.30ಕ್ಕೆ ಚಾಮರಾಜನಗರದಲ್ಲಿ ವೈದ್ಯಕೀಯ ಕಾಲೇಜು ಬೋಧನಾ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಸಂಜೆ 4.50ಕ್ಕೆ ಮಂಗಳೂರಿಗೆ ತೆರಳಲಿದ್ದಾರೆ.

Advertisement

ನಗರದ ಹೊರವಲಯದ ಯಡಪುರದಲ್ಲಿ ನಿರ್ಮಾಣ ಮಾಡಲಾಗಿರುವ 450 ಹಾಸಿಗೆಗಳ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ (ಸಿಐಎಂಎಸ್‌) ಬೋಧನಾ ಆಸ್ಪತ್ರೆಯನ್ನು ಮಧ್ಯಾಹ್ನ3.30 ಕ್ಕೆ ಉದ್ಘಾಟಿಸುವರು. ರಾಜ್ಯಪಾಲರಾದ ತಾವರಚಂದ್‌ ಗೆಹ್ಲೋಥ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಗುರಿ ಹೊಂದಿದೆ ಮತ್ತು ಇದು ಜಿಲ್ಲೆಯ ಏಕೈಕ ತೃತೀಯ ಹಂತದ ಆರೋಗ್ಯ ವ್ಯವಸ್ಥೆ ಹೊಂದಿರುವ ಕೇಂದ್ರವಾಗಿದೆ. ಆರೋಗ್ಯ ರಕ್ಷಣೆ ವಿತರಣಾ ವ್ಯವಸ್ಥೆಯು ಜಿಲ್ಲೆಯ ಎಲ್ಲರಿಗೂ ಕೈಗೆಟುಕುವಂತೆ ಹೊಸ ಬೋಧನಾ ಆಸ್ಪತ್ರೆಯು ಮಾಡಲಿದೆ.

ಇದನ್ನೂ ಓದಿ;- ಮಸೀದಿಗಳ ಅಕ್ರಮ ಮೈಕ್ ಗಳನ್ನು ತೆರವುಗೊಳಿಸಿ: ಪ್ರಮೋದ್ ಮುತಾಲಿಕ್ ಆಗ್ರಹ

ಗಡಿ ಜಿಲ್ಲೆಯಾ ದ್ದರಿಂದ ನೆರೆ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದ ಜನರೂ ಸಹ ಈ ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದು ಎಂದು ಎಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್‌ ಮತ್ತು ನಿರ್ದೇಶಕ ಡಾ. ಜಿ.ಎಂ. ಸಂಜೀವ್‌ ತಿಳಿಸಿದ್ದಾರೆ.

166 ಕೋಟಿ ರೂ. ವೆಚ್ಚದ ಸಿಮ್ಸ್ ಬೋಧನಾ ಆಸ್ಪತ್ರೆ

Advertisement

ಭಾರತೀಯ ವೈದ್ಯಕೀಯ ಮಂಡಳಿಯ ಮಾರ್ಗಸೂಚಿಗಳ ಅನ್ವಯ ರಾಜ್ಯ ಸರ್ಕಾರವು 2018-19ನೇ ಸಾಲಿನಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದನೆ ನೀಡಿತ್ತು. 450 ಹಾಸಿಗೆಗಳ ಬಹುಮಹಡಿ (ನೆಲ+ನಾಲ್ಕು), ಸಿಮ್ಸ್‌ ಬೋಧನಾ ಆಸ್ಪತ್ರೆ 30,728 ಚ.ಮಿ. ವಿಸ್ತೀರ್ಣ ಹೊಂದಿದ್ದು, ಇದನ್ನು 166.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಹೊಸ ಬೋಧನಾ ಆಸ್ಪತ್ರೆಯಲ್ಲಿ ಒಂಬತ್ತು ಆಧುನಿಕ ಆಪರೇಷನ್‌ ಥಿಯೇಟರ್‌ಗಳು, ಸುಸಜ್ಜಿತ 50 ಹಾಸಿಗೆ ಐಸಿಯು ವಾರ್ಡ್‌ಗಳು, 20 ಕೆಎಲ್‌ ದ್ರವ ಆಮ್ಲಜನಕ ಸಂಗ್ರಹ ಟ್ಯಾಂಕ್‌, 2,000 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಜನರೇಟರ್‌ಗಳು, ಕೇಂದ್ರಿತ ವೈದ್ಯಕೀಯ ಗ್ಯಾಸ್‌ ಪೈಪ್‌ಲೈನ್‌ ವ್ಯವಸ್ಥೆ, ಹೊರರೋಗಿಗಳು(ಒಪಿಡಿ) ಮತ್ತು ಒಳರೋಗಿಗಳು (ಐಪಿಡಿ) ವಿಭಾಗಗಳಲ್ಲದೆ 30 ಹಾಸಿಗೆಗಳ ತುರ್ತು ವಿಭಾಗ ಕೂಡ ಇವೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next