Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಗೆ ಬೆಂಬಲ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇವೇಗೌಡರು ಮಮತಾ ಬ್ಯಾನರ್ಜಿ ಅವರು ಕರೆದಿದ್ದ ಸಭೆಗೂ ಹೋಗಿದ್ದರು, ಅಲ್ಲಿಂದ ಬಂದ ಮೇಲೆ ಬದಲಾವಣೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಜಾತ್ಯತೀತ ಪಕ್ಷ ಎನ್ನುತ್ತಾರೆ, ಆದ್ದರಿಂದ ನೀವು ದೇವೇಗೌಡರನ್ನೇ ಈ ಬಗ್ಗೆ ಕೇಳಬೇಕು ಎಂದು ತಿಳಿಸಿದರು.
Related Articles
Advertisement
ಮಾರ್ಗರೇಟ್ ಆಳ್ವ ಅನುಭವಿ ರಾಜಕಾರಣಿ. ರಾಜ್ಯಸಭೆ, ಲೋಕಸಭೆ ಸದಸ್ಯರಾಗಿದ್ದರು, ಕೇಂದ್ರದ ಮಂತ್ರಿ ಹಾಗೂ 3-4 ರಾಜ್ಯಗಳಿಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇವರನ್ನು ಶರದ್ ಪವಾರ್ ಅವರು ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ. ಒಬ್ಬ ಮಹಿಳೆ, ಮುತ್ಸದ್ಧಿ ರಾಜಕಾರಣಿಯನ್ನು ಗೆಲ್ಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ.– ಸಿದ್ದರಾಮಯ್ಯ, ಮಾಜಿ ಸಿಎಂ