Advertisement

ರಾಷ್ಟ್ರಪತಿ ಚುನಾವಣೆ: ಗೌಡರನ್ನೇ ಕೇಳಬೇಕು ಎಂದ ಸಿದ್ದರಾಮಯ್ಯ

08:58 PM Jul 18, 2022 | Team Udayavani |

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್‌, ಬಿಜೆಪಿ ಅಭ್ಯರ್ಥಿಗೆ ಮತ ಹಾಕಿರುವ ಬಗ್ಗೆ ದೇವೇಗೌಡರನ್ನೇ ಕೇಳಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್‌ ಬಿಜೆಪಿಗೆ ಬೆಂಬಲ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇವೇಗೌಡರು ಮಮತಾ ಬ್ಯಾನರ್ಜಿ ಅವರು ಕರೆದಿದ್ದ ಸಭೆಗೂ ಹೋಗಿದ್ದರು, ಅಲ್ಲಿಂದ ಬಂದ ಮೇಲೆ ಬದಲಾವಣೆ ಮಾಡಿಕೊಂಡಿದ್ದಾರೆ. ಜೆಡಿಎಸ್‌ ಜಾತ್ಯತೀತ ಪಕ್ಷ ಎನ್ನುತ್ತಾರೆ, ಆದ್ದರಿಂದ ನೀವು ದೇವೇಗೌಡರನ್ನೇ ಈ ಬಗ್ಗೆ ಕೇಳಬೇಕು ಎಂದು ತಿಳಿಸಿದರು.

ಇದಕ್ಕೆ ತಿರುಗೇಟು ನೀಡಿರುವ ಎಚ್‌.ಡಿ.ಕುಮಾರಸ್ವಾಮಿ, ರಾಷ್ಟ್ರಪತಿ ಚುನಾವಣೆ ಪಕ್ಷಾಧಾರಿತ ಚುನಾವಣೆ ಅಲ್ಲ. ರಾಷ್ಟ್ರಪತಿಗಳು ದೇಶದ ಪ್ರಥಮ ಪ್ರಜೆ. ರಾಷ್ಟ್ರಪತಿ ಅಭ್ಯರ್ಥಿ ಬಿಜೆಪಿಯವರೇ ಇರಬಹುದು. ಆದರೆ, ಅವರು ಗೆದ್ದ ಮೇಲೆ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂದು ಹೇಳಿದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಜಾತ್ಯತೀತ ಬಗ್ಗೆ ನನಗೆ ಗೊತ್ತಿದೆ. ಯಡಿಯೂರಪ್ಪ 2008ರಲ್ಲಿ ಆಪರೇಷನ್‌ ಕಮಲ ನಡೆಸಿದಾಗ ಇವರು ಏನು ಮಾಡಿದರೆಂಬುದು ನನಗೆ ಗೊತ್ತಿದೆ ಎಂದು ತಿಳಿಸಿದರು.

ಇದು ಕೊನೇ ಚುನಾವಣೆ ಅಂತಾರೆ. ಭ್ರಷ್ಟ ಸರ್ಕಾರ ತೆಗೆಯಲು ಚುನಾವಣೆ ನಿಲ್ಲುತ್ತೇನೆ ಎನ್ನುತ್ತಾರೆ. ಇಂತಹ ಸರ್ಕಾರ ಬರಲು ಯಾರು ಕಾರಣ? ನಿಮ್ಮ ಕಾಲದಲ್ಲಿ ಭ್ರಷ್ಟಾಚಾರ ಮರೆತು ಹೋಗಿದ್ದೀರಾ? ಲಾಟರಿ ಹಗರಣದಲ್ಲಿ ಏನು ಮಾಡಿದಿರಿ ಎಂದು ಪ್ರಶ್ನಿಸಿದರು.

Advertisement

ಮಾರ್ಗರೇಟ್‌ ಆಳ್ವ ಅನುಭವಿ ರಾಜಕಾರಣಿ. ರಾಜ್ಯಸಭೆ, ಲೋಕಸಭೆ ಸದಸ್ಯರಾಗಿದ್ದರು, ಕೇಂದ್ರದ ಮಂತ್ರಿ ಹಾಗೂ 3-4 ರಾಜ್ಯಗಳಿಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇವರನ್ನು ಶರದ್‌ ಪವಾರ್‌ ಅವರು ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ. ಒಬ್ಬ ಮಹಿಳೆ, ಮುತ್ಸದ್ಧಿ ರಾಜಕಾರಣಿಯನ್ನು ಗೆಲ್ಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ.
– ಸಿದ್ದರಾಮಯ್ಯ, ಮಾಜಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next