Advertisement

ರಾಷ್ಟ್ರಪತಿ ಚುನಾವಣೆ ಹಿನ್ನೆಲೆ: ಕಾಂಗ್ರೆಸ್‌ನಿಂದ ವಿಪ್‌ ಜಾರಿ

07:45 PM Jul 12, 2022 | Team Udayavani |

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಪರ ಮತ ಚಲಾಯಿಸಲು ಶಾಸಕರು, ಸಂಸದರು, ಪರಿಷತ್‌ ಸದಸ್ಯರಿಗೆ ವಿಪ್‌ ಜಾರಿ ಮಾಡಿದೆ.

Advertisement

ಈ ಕುರಿತು ಸಚೇತಕ ತುಕಾರಾಂ ಎಲ್ಲ ಸದಸ್ಯರಿಗೆ ಪತ್ರ ಬರೆದಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಯಶವಂತ ಸಿನ್ಹಾ ಸ್ಪರ್ಧೆ ಮಾಡಿದ್ದು, ಜು. 18ರಂದು ನಡೆಯಲಿರುವ ಮತದಾನದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯೊಳಗೆ ಅವರಿಗೆ ಮತ ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಂದ ನಿರ್ದೇಶಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next