Advertisement
ಮಡಿಕೇರಿ : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿತೇಂದ್ರ ರೈ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಕೊಡಗು ಜಿಲ್ಲಾ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಲ್ಲಿ ಜಿತೇಂದ್ರ ಅವರು ಸಲ್ಲಿಸಿದ ಉತ್ತಮ ಸೇವೆಗಾಗಿ ಪ್ರಶಸ್ತಿ ಲಭಿಸಿದೆ. ಪ್ರಸ್ತುತ ಇವರು ಬಾಂಬ್ ನಿಷ್ಕ್ರಿಯ ದಳದಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Related Articles
Advertisement
ಕೆಎಸ್‌ಆರ್‌ಪಿಯ ಪ್ರಕಾಶ್ ಶೆಟ್ಟಿ :
ಉಳ್ಳಾಲ: ಅಸೈಗೋಳಿಯಲ್ಲಿರುವ ಕರ್ನಾಟಕ ಪೊಲೀಸ್‌ಮೀಸಲು ಪಡೆಯ 7ನೇ ಪಡೆಯ ಹೆಡ್‌ಕಾನ್‌ಸ್ಟೆಬಲ್ ಪ್ರಕಾಶ್ ಶೆಟ್ಟಿ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮೂಲತಃ ಬಜಾಲ್ ಕಲ್ಲಗುಡ್ಡೆ ನಿವಾಸಿಯಾಗಿರುವ ಪ್ರಕಾಶ್ ಶೆಟ್ಟಿ 1993ರಲ್ಲಿ ಶಿವಮೊಗ್ಗ ಜಿಲ್ಲೆಯ ಮಾಚನಹಳ್ಳಿಯಲ್ಲಿರುವ ಕರ್ನಾಟಕ ಮೀಸಲು ಪಡೆಯ 8ನೇ ಪಡೆಗೆ ಕಾನ್‌ಸ್ಟೆಬಲ್ ಆಗಿ ಸೇವೆ ಆರಂಭಿಸಿದರು. 1996ರಲ್ಲಿ ಮಂಗಳೂರಿನ ಅಸೈಗೋಳಿಯಲ್ಲಿರುವ ಕೆಎಸ್‌ಆರ್‌ಪಿಯ 7ನೇ ಪಡೆಗೆ ವರ್ಗಾವಣೆಗೊಂಡಿದ್ದರು. 28 ವರ್ಷಗಳ ಕಾಲ ಇಲಾಖೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪದಕ ಲಭಿಸಿದೆ.
ಮೂಡುಬಿದಿರೆಯ ಅಗ್ನಿಶಾಮಕ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ :
ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ. ಬಂಗೇರ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಪ್ರವೀಣ್ 38 ವರ್ಷಗಳಿಂದ, ಯೋಗೀಶ್ ಬಂಗೇರ ಅವರು 28 ವರ್ಷಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.