Advertisement

ನವೆಂಬರ್ 7ರೊಳಗೆ ಸರಕಾರ ರಚನೆಯಾಗದಿದ್ರೆ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ?

08:15 AM Nov 02, 2019 | Team Udayavani |

ಮುಂಬೈ: ಬಿಜೆಪಿ ಮತ್ತು ಶಿವಸೇನಾ ಮೈತ್ರಿಪಕ್ಷಗಳ ಬಿಕ್ಕಟ್ಟಿನಿಂದಾಗಿ ಒಂದು ವೇಳೆ ನವೆಂಬರ್ 7ರೊಳಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಾಂಟಿವರ್ ತಿಳಿಸಿದ್ದಾರೆ.

Advertisement

ಅಕ್ಟೋಬರ್ 21ರಂದು ವಿಧಾನಸಭೆ ಚುನಾವಣೆ ನಡೆದಿದ್ದು, ಫಲಿತಾಂಶ ಘೋಷಣೆಯಾದ ಎಂಟು ದಿನದೊಳಗೆ ಸರ್ಕಾರ ರಚನೆಯಾಗದಿದ್ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲು ಅವಕಾಶ ಇದೆ ಎಂದು ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಹಾಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ (ವಿಧಾನಸಭೆಯ) ಮೊದಲ ಅವಧಿ ನವೆಂಬರ್ 8ಕ್ಕೆ ಮುಕ್ತಾಯಗೊಳ್ಳಲಿದೆ. ದೀಪಾವಳಿ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಜತೆಗಿನ ಮಾತುಕತೆ ವಿಳಂಬವಾಗಿದೆ ಎಂದು ಸುಧೀರ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮತದಾರರು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲ. ಆದರೆ ಬಿಜೆಪಿ, ಶಿವಸೇನಾ ಹಾಗೂ ಇತರ ಪಕ್ಷಗಳ ಮೈತ್ರಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು. ನಮ್ಮ ಮೈತ್ರಿ ಫೆವಿಕೋಲ್ ಕ್ಕಿಂತಲೂ ಗಟ್ಟಿಯಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನವೆಂಬರ್ 5ಕ್ಕೆ ಪ್ರಮಾಣವಚನ:

Advertisement

ದೇವೇಂದ್ರ ಫಡ್ನವೀಸ್ ಅವರು ನವೆಂಬರ್ 5ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಜೀ ನ್ಯೂಸ್ ವರದಿ ಮಾಡಿದೆ. ಬಿಜೆಪಿಯೇ ಸರಕಾರ ರಚಿಸಲಿದ್ದು, ನ.5 ಅಥವಾ 6ರಂದು ಮುಂಬೈನ ವಾಂಖೇಡೆ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next