Advertisement
ರಾಷ್ಟ್ರಪತಿಯವರನ್ನು ಸ್ವಾಗತಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊತ್ ಮಂಗಳೂರಿಗೆ ಆಗಮಿಸಿದ್ದು, ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ.
Related Articles
Advertisement
ರಾಷ್ಟ್ರಪತಿಯವರು ನಗರದ ಸರ್ಕೀಟ್ ಹೌಸ್‌ನಲ್ಲಿ ವಾಸ್ತವ್ಯದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿನ ಸಂಚಾರ ವ್ಯವಸ್ಥೆಯಲ್ಲಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ 11ರ ವರೆಗೆ ಮಾರ್ಪಾಟು ಮಾಡಿದ್ದು ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಕೆಪಿಟಿ ಕಡೆಯಿಂದ ಸರ್ಕೀಟ್ ಹೌಸ್ ಜಂಕ್ಷನ್-ಬಟ್ಟಗುಡ್ಡೆ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸಬೇಕು. ಕೆಎಸ್‌ಆರ್‌ಟಿಸಿ , ಬಿಜೈ, ಬಟ್ಟಗುಡ್ಡೆ, ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು ಕುಂಟಿಕಾನ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಕಡೆಗೆ ಚಲಿಸಬೇಕು. ಬಂಟ್ಸ್‌ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡೆ ಮೂಲಕ ರಾಷ್ಟ್ರೀಯ ಹೆದ್ದಾರಿನ ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್‌ಹಾಸ್ಟೆಲ್ ಸರ್ಕಲ್, ಮಲ್ಲಿಕಟ್ಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಂತೂರು ಜಂಕ್ಷನ್ ಮೂಲಕ ಮುಂದುವರಿಯಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕೀಟ್ ಹೌಸ್ ಸುತ್ತಮುತ್ತ ಹಾಗೂ ಪರಿಸರದಲ್ಲಿ ರಾತ್ರಿ ಪ್ರಖರ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. 24 ತಾಸು ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ವಾಗದಂತೆ ನಿಗಾ ವಹಿಸಲಾಗಿದ್ದು ಮುಂಜಾಗ್ರತವಾಗಿ ಜನರೇಟರ್‌ಗಳನ್ನು ಕೂಡ ವ್ಯವಸ್ಥೆಗೊಳಿಸಲಾಗಿದೆ.
ಸುಲಲಿತ ದೂರಸಂಪರ್ಕ ವ್ಯವಸ್ಥೆಗೆ ಬಿಎಸ್‌ಎನ್‌ಎಲ್‌ನಿಂದ ಹಾಟ್‌ಲೆçನ್ ವ್ಯವಸ್ಥೆಗೊಳಿಸಲಾಗಿದೆ. ರಾಷ್ಟ್ರಪತಿಗಳು, ಅವರೊಂದಿಗೆ ಆಗಮಿಸಲಿರುವ ಅಧಿಕಾರಿಗಳು ಹಾಗೂ ಸಿಬಂದಿಗೆ ಉತ್ತಮ ವಾಸ್ತವ್ಯ, ಊಟೋ ಪಚಾರವನ್ನು ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿದೆ. ದೇಶದ ಪ್ರಥಮ ಪ್ರಜೆಯ ವಾಸ್ತವ್ಯದ ಸಂದರ್ಭದಲ್ಲಿ ಯಾವುದೇ ಸಣ್ಣಪುಟ್ಟ ಲೋಪಗಳು ಕೂಡ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.
ಸಕೀìಟ್ ಹೌಸ್‌ನ ಪ್ರವೇಶದ್ವಾರ ಪರಿಸರವನ್ನು ಸುಂದರಗೊಳಿಸಲಾಗಿದ್ದು, ಹಸುರುಕರಣದೊಂದಿಗೆ ಕಂಗೊಳಿಸುತ್ತಿದೆ. ಪ್ರವೇಶ ದ್ವಾರ, ವೃತ್ತಗಳಿಗೆ, ವಿಭಜಕಗಳಿಗೆ ಬಣ್ಣ ಬಳಿಯಲಾಗಿದೆ. ಸಕೀìಟ್ ಹೌಸ್ ಆವರಣದಲ್ಲಿ ಹಸುರುàಕರಣಗೊಳಿಸಿ ಗಾರ್ಡನ್‌ಗಳು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ.