Advertisement

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

03:44 AM Sep 22, 2024 | Team Udayavani |

ಮೈಸೂರು: ಜನರಿಗೆ ಸತ್ಯ ಹೇಳುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು. ಆದರೆ ಇತ್ತೀಚೆಗೆ ಸುಳ್ಳು ಸುದ್ದಿ ಸೃಷ್ಟಿಸಿ ಮತ್ತೂಬ್ಬರ ತೇಜೋವಧೆ ಮಾಡುವ ಕೆಲಸ ಹೆಚ್ಚಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇ ಕಿದೆ. ಅದಕ್ಕಾಗಿ ಸುದ್ದಿಗಳನ್ನು ಫ್ಯಾಕ್ಟ್ ಚೆಕ್‌ ಮಾಡಲು ಸರಕಾರ ಮುಂದಾಗಿದೆ. ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್‌ ಮಾಡಲಿದೆ ಎಂದರು.

ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯಗಳಾಗಿವೆ. ಹಾಗೆಂದು ಸುಳ್ಳು ಸುದ್ದಿಗಳಿಗೆ ತಡೆ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದರು.

ಕೆಲವು ತಿಂಗಳ ಹಿಂದೆ “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಉದಾಹರಣೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next