ಬೆಂಗಳೂರು: ಬಿಜೆಪಿ ಸರ್ಕಾರದ ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಬಹಿರಂಗ ಅಸಮಾಧಾನ ಹೊರ ಹಾಕಿರುವ ಆ ಸಮಾಜದ ಶಾಸಕರು ಹಾಗೂ ಸ್ವಾಮೀಜಿಗಳು, ಮಂಗಳವಾರ ರಹಸ್ಯ ಸಭೆ ನಡೆಸಿ ಪಂಚಮಸಾಲಿ ಸಮಾಜದ ಪ್ರಮುಖ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ.
ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮುದಾಯದ ಶಾಸಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಇತ್ತೀಚೆಗೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವಲಸೆ ಬಂದಿರುವ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದರಿಂದ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಅದನ್ನು ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸರಿಪಡಿಸಿ ಸಮಾ ಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಸಮಾಜದ ಎಲ್ಲಾ ಶಾಸಕರು ಒಟ್ಟಾಗಿ ಒತ್ತಡ ಹೇರುವಂತೆ ಸ್ವಾಮೀಜಿ ಶಾಸಕರಿಗೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಪ್ರಮುಖವಾಗಿ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಕಳೆದ 25 ವರ್ಷಗಳಿಂದಲೂ ಹೋರಾಟ ನಡೆಸು ತ್ತಿದ್ದರೂ ಶಿಕ್ಷಣ ಹಾಗೂ ಉದ್ಯೋಗ ಅನ್ಯಾಯ ಸರಿ ಪಡಿಸಿಲ್ಲ. ಅಲ್ಲದೇ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಮೀಸ ಲಾತಿ ಪಟ್ಟಿಯಲ್ಲಿ ಪಂಚಮಸಾಲಿ ಸಮಾಜವನ್ನು ಹಿಂದು ಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಸಿಎಂ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಲು ಸ್ವಾಮೀಜಿ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ಒಕ್ಕಲಿಗ ಸಮುದಾಯವನ್ನು ಕೇಂದ್ರದ ಮೀಸಲಾತಿ ಪಟ್ಟಿಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿಸಿರುವುದರಿಂದ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಆ ಸಮುದಾಯಕ್ಕೆ ಹೆಚ್ಚಿನ ಅನುಕೂಲವಾಗು ತ್ತಿದೆ. ಅದೇ ರೀತಿ ಕೃಷಿಯನ್ನೇ ನಂಬಿಕೊಂಡಿರುವ ಪಂಚಮ ಸಾಲಿ ಸಮುದಾಯವನ್ನೂ ಹಿಂದುಳಿದ ವರ್ಗಕ್ಕೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕೆಂದು ತಿಳಿಸಿದ್ದಾರೆ.
ಇದಲ್ಲದೇ ಹುಬ್ಬಳ್ಳಿ-ಧಾರವಾಡ ಒಳಗೊಂಡಂತೆ ಹಳೆ ಧಾರವಾಡ ಜಿಲ್ಲೆ ವ್ಯಾಪ್ತಿಗೊಳಪಡುವ ವಾಯುವ್ಯ ಪದವೀಧರ ವಿಧಾನ ಪರಿಷತ್ ಸ್ಥಾನಕ್ಕೆ ಮೋಹನ್ ಲಿಂಬಿಕಾಯಿ ಅವರಿಗೆ ಟಿಕೆಟ್ ನೀಡುವಂತೆ ಸಿಎಂ ಮೇಲೆ ಒತ್ತಡ ಹೇರಲು ನಿರ್ಧರಿಸಿ ದ್ದಾರೆ ಎಂದು ತಿಳಿದು ಬಂದಿದೆ. ಮೋಹನ್ ಲಿಂಬಿಕಾಯಿ ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪನೆ ಮಾಡಿದಾಗ ಅವರೊಂದಿಗೆ ತೆರಳಿ ವಿಧಾನ ಪರಿಷತ್ ಸ್ಥಾನ ತ್ಯಜಿಸಿದ್ದರು.
ಹೀಗಾಗಿ ಈ ಬಾರಿ ಚುನಾವಣೆಗೆ ಮೋಹನ್ ಲಿಂಬಿಕಾಯಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಡ ಹೇರಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಪಂಚಮಸಾಲಿ ಸಮಾಜದ ಶಾಸಕರಾದ ಮುರು ಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್, ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣ ವರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ್ ಲಿಂಬಿಕಾಯಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.
ಪಂಚಮಸಾಲಿ ಸಮಾಜಕ್ಕೆ ಸಂಪುಟದಲ್ಲಿ ಸೂಕ್ತ ಸ್ಥಾನ ದೊರೆತಿಲ್ಲ. ಅದನ್ನು ಮುಂದಿನ ಬಾರಿ ವಿಸ್ತರಣೆಯಲ್ಲಿ ಸರಿಪಡಿಸಲು ಸಿಎಂಗೆ ಒತ್ತಡ ಹೇರಲಾಗುವುದು. ಅಲ್ಲದೇ, ವಿಶೇಷವಾಗಿ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಯಲ್ಲಿ ಪಂಚಮಸಾಲಿ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡುವಂತೆ ಸಿಎಂಗೆ ಮನವಿ ಮಾಡಲು ನಿರ್ಧರಿಸಲಾಗಿದೆ.
-ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲ ಸಂಗಮ.