Advertisement

ಗೋ ಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಕೋಟ

09:38 AM May 02, 2020 | mahesh |

ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನ ಫಜೀರು ಗೋವನಿತಾಶ್ರಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

Advertisement

ಗೋಶಾಲೆಗಳಿಗೆ ಹುಲ್ಲು ಸಹಿತ ಅಗತ್ಯ ಆಹಾರ ಸಾಮಗ್ರಿಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು, ಹಾಸನ ಸಹಿತ ಹೊರ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹುಲ್ಲು ತರಿಸಲು ವಾಹನಗಳಿಗೆ ಪಾಸ್‌ ನೀಡುವುದು ಸಹಿತ ಪಶುಸಂಗೋಪನ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಗೋಶಾಲೆಗಳಿಗೆ ನೀರು ಒದಗಿಸಲು ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.

ಗೋಸೇವಾ ಆಯೋಗದ ಮಾಜಿ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌, ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ, ಚಂದ್ರಹಾಸ ಪೂಂಜ, ರಾಜೇಶ್‌ ಶೆಟ್ಟಿ, ವಾಮನರಾಜ, ರವಿರಾಜ್‌, ರಮೇಶ್‌ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next