Advertisement

ಬಿಜೆಪಿ ಜಾಹಿರಾತುಗಳಿಗೆ ತಡೆ

07:50 AM Apr 28, 2018 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ಘಟಕದಿಂದ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಜಾಹಿರಾತುಗಳನ್ನು ಪ್ರಸಾರ ಮಾಡಿದ್ದರ ವಿರುದ್ಧ ವಿ.ಎಸ್‌. ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದಕ್ಕೆ ಸ್ಪಂದಿಸಿದ ಆಯೋಗ ಆಕ್ಷೇಪಾರ್ಹ ಜಾಹೀರಾತುಗಳ ಪ್ರಸಾರ ತಡೆಹಿಡಿದಿದೆ. ಶುಕ್ರವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಇದರಿಂದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸುಳ್ಳು ಮಾಹಿತಿ ಪ್ರಚಾರ ಮಾಡಿ ರಾಜ್ಯದ ಜನತೆಯ ದಾರಿ ತಪ್ಪಿಸಿರುವುದು ಸಾಬೀತಾಗಿದೆ. ಹೀಗಾಗಿ ರಾಜ್ಯದ ಜನತೆಯ ಬೇಷರತ್‌ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next