Advertisement

ಹಳ್ಳಿಯಲ್ಲಿ ಕೋವಿಡ್‌ ಹರಡುವಿಕೆ ತಡೆಗಟ್ಟಿ

06:59 PM Jun 02, 2021 | Girisha |

ವಿಜಯಪುರ: ಗ್ರಾಮೀಣ ಮಟ್ಟದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವಶ್ಯಕ ಎಲ್ಲ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಅವರು ತಹಶೀಲ್ದಾರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ .

Advertisement

ಮಂಗಳವಾರ ಜಿಲ್ಲಾ ಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ ಅವರು, ಕೋವಿಡ್‌ ಎರಡನೇ ಅಲೆ ಹರಡದಂತೆ ಸರಪಳಿ ಕಡಿತ ಮಾಡಲು ಈಗಾಗಲೇ ಸರ್ಕಾರದಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಲಾಗಿದೆ. ಹೀಗಾಗಿ ರೋಗ ನಿಯಂತ್ರಣ ಕುರಿತು ನಗರದ ಜೊತೆಗೆ ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರ ತಂಡ ಗ್ರಾಮದ ಪ್ರತಿ ಮನೆ ಮನೆಗೆ ಸಮೀಕ್ಷೆಯಲ್ಲಿ ತೊಡಗಿದ್ದು, ರೋಗ ಲಕ್ಷಣ ಇರುವವರು ಕಂಡು ಬಂದಲ್ಲಿ ಕೂಡಲೇ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಅಲ್ಲದೇ ಅವರನ್ನು ಕೋವಿಡ್‌ ಕೇರ್‌ ಕೇಂದ್ರಕ್ಕೆ ಸಾಗಿಸುವ ಇಲ್ಲವೇ ಹೋಂ ಐಸೋಲೇಷನ್‌ ಆಗಲು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳು ಹೆಚ್ಚುತ್ತಿದ್ದು, ಉಪ ವಿಭಾಗಾ  ಧಿಕಾರಿಗಳು, ತಹಶೀಲ್ದಾರ್‌ರು, ತಾಪಂ ಇಒಗಳು ಸಮನ್ವಯದಿಂದ ಕೆಲಸ ಮಾಡಿ, ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯ ವೇಗ ತಗ್ಗಿಸಲು ಹಾಗೂ ಸಂಪೂರ್ಣ ನಿಗ್ರಹಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ಸರ್ಕಾರದ ಮಾರ್ಗಸೂಚಿಯಲ್ಲಿ ಮದುವೆ ಸಮಾರಂಭಗಳಿಗೆ ಗರಿಷ್ಠ 40 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ತಹಶೀಲ್ದಾರ್‌ರು ಮದುವೆ ಸಮಾರಂಭ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸರ್ಕಾರದ ಮಾರ್ಗಸೂಚಿ ಉಲ್ಲಂಘಿ ಸಿದ ಪ್ರಕರಣಗಳಲ್ಲಿ ಕೂಡಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.

ತಾಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣ ಕಂಡುಬಂದಿರುವ ಐದು ಗ್ರಾಮಗಳಿಗೆ ತಹಶೀಲ್ದಾರ್‌ರು, ತಾಪಂ ಇಒ ಜಂಟಿಯಾಗಿ ಆಯಾ ಭೇಟಿ ನೀಡಿ ಸೋಂಕು ಹೆಚ್ಚಲು ಕಾರಣವಾದ ಅಂಶಗಳ ಕುರಿತು ಪತ್ತೆ ಹಚ್ಚಬೇಕು. ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲ ಕ್ರಮ ಕೈಗೊಳ್ಳುವ ಜತೆಗೆ ಕಟ್ಟುನಿಟ್ಟಿನ ನಿಗಾ ಇರಿಸಬೇಕು. ತಹಶೀಲ್ದಾರ್‌ ರ ನೇತೃತ್ವದ ತಂಡ ಹಳ್ಳಿಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ನಿತ್ಯವೂ ಪರಿಶೀಲನೆ ಮಾಡಬೇಕು.

ರೋಗ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ  ಧಿಕಾರಿಗಳಿಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು. ತಹಶೀಲ್ದಾರ್‌-ತಾಪಂ ಇಒ ಜಂಟಿ ತಂಡ ತಾಲೂಕು ವ್ಯಾಪ್ತಿಯಲ್ಲಿ ಬೇರೆ ಬೇರೆ 10 ಗ್ರಾಮಗಳಿಗೆ ಪ್ರತಿ ದಿನ ಭೇಟಿ ನೀಡಿ ಕೋವಿಡ್‌ ಮುನ್ನೆಚ್ಚರಿಕೆ ಕುರಿತು ಜನರಿಗೆ ಸೂಕ್ತ ತಿಳಿವಳಿಕೆ ನೀಡಬೇಕು. ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಸೂಚಿಸಿದರು. ಜಿಪಂ ಇಒ ಗೋವಿಂದ ರೆಡ್ಡಿ, ಅಪರ ಜಿಲ್ಲಾ ಧಿಕಾರಿ ರಮೇಶ ಕಳಸದ ಸೇರಿದಂತೆ ಅಧಿ  ಕಾರಿಗಳು ಪಾಲ್ಗೊಂಡಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next