Advertisement

ವಲಸಿಗರ ಅಕ್ರಮ ಪ್ರವೇಶ ತಡೆಗಟ್ಟಿ

12:47 PM May 01, 2020 | mahesh |

ಅರಸೀಕೆರೆ: ಗ್ರೀನ್‌ ಝೋನ್‌ ನಲ್ಲಿ ಸರ್ಕಾರ ಲಾಕ್‌ಡೌನ್‌ ಸಡಿಲಗೊಳಿಸುವ ಸಾಧ್ಯತೆಯಿದ್ದು, ರೆಡ್‌ ಝೋನ್‌ನಿಂದ ಅಕ್ರಮವಾಗಿ ವಲಸಿಗರು ಜಿಲ್ಲೆಗೆ ಪ್ರವೇಶಿಸುವುದನ್ನು ತಾಲೂಕು ಆಡಳಿತ ತಡೆಗಟ್ಟಬೇಕು ಎಂದು ಹಾಸನ ವೈದ್ಯಕೀಯ ಮಹಾವಿದ್ಯಾಲಯ (ಹಿಮ್ಸ್‌ ) ವೈದ್ಯಶಾಸ್ತ್ರ ವಿಭಾಗದ ನಿರ್ದೇಶಕರಾದ ಪ್ರೊ. ಡಾ.ಸುಂದರ್‌ ಸಲಹೆ ನೀಡಿದರು.

Advertisement

ತಾಲೂಕಿನ ರಂಗಾಪುರ ಕಾವಲಿನ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿನ ಕ್ವಾರಂಟೈನ್‌ ಕೇಂದ್ರ ಹಾಗೂ ಗಡಿಭಾಗದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಅವರು ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಪ್ಪ ಅವರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. 37 ಮಂದಿ ವಿದೇಶಿಯರು ಮತ್ತು 302 ಮಂದಿ ಬೇರೆ ಬೇರೆ ರಾಜ್ಯಗಳಿಂದ ಬಂದವರು ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಜೆಲ್ಲೆಗಳಿಂದ ಬಂದಿದ್ದವರನ್ನು ತಾಲೂಕಿನಲ್ಲಿ ಗುರುತಿಸಿ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈಗಾಗಲೇ 264 ಮಂದಿ ಕ್ವಾರಂಟೈನ್‌ ಅವಧಿ ಮುಕ್ತಾಯವಾಗಿದ್ದು, ಸೋಂಕು ಪ್ರಕರಣಗಳು ಕಂಡು ಬಂದಿಲ್ಲ ಎಂದರು. ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ತಾಲೂಕು ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಸೇರಿದಂತೆ ಔಷಧಿ ಮಾತ್ರೆಗಳು ಇತ್ಯಾದಿ ಸಲಕರಣೆಗಳನ್ನು ಸಿದ್ಧಗೊಳಿಸಲು ಸೂಚಿಸಿದ್ದೇನೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಪ್ಪ, ಸರ್ಕಾರಿ ಜೆ.ಸಿ.ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕರಿಯಪ್ಪ, ಹಾಸನ ವೈದ್ಯಕೀಯ ವಿಶ್ವವಿದ್ಯಾಲಯದ ಉಪನ್ಯಾಸಕ ಆರ್‌. ವಿಜಯಕುಮಾರ್‌, ಹಾಗೂ ಡಾ.ಕರ್ಮನ್‌, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಮುಖ್ಯಸ್ಥರಾದ ಡಾ.ಚಾಣಕ್ಯ ಪತಂಜಲಿ, ಇನ್ಸ್‌ಪೆಕ್ಟರ್‌ ಪೂಜಾ ಆರೋಗ್ಯಾಧಿಕಾರಿ ಜಬ್ಬೀರ್‌ ಪಾಷಾ, ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next