Advertisement

ಗ್ರಾಪಂ ಆಡಳಿತದಲ್ಲಿ ಹಸ್ತಕ್ಷೇಪ ತಡೆಯಿರಿ

12:18 PM Jan 16, 2022 | Team Udayavani |

ಆಳಂದ: ತಾಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಗಳಲ್ಲಿ ನಡೆಯುತ್ತಿರುವ ಹಸ್ತಕ್ಷೇಪವನ್ನು ತಡೆಯಬೇಕು ಎಂದು ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ಅಖೀಲ ಭಾರತ ಕಿಸಾನಸಭಾ ಮತ್ತು ಭಾರತೀಯ ಖೇತ್‌ ಮಜ್ದೂರ್‌ ಯೂನಿಯನ್‌ ತಾಲೂಕು ಘಟಕ ಒತ್ತಾಯಿಸಿದೆ.

Advertisement

ಈ ಕುರಿತು ಪಟ್ಟಣದ ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು, ಗ್ರಾಪಂಗಳಲ್ಲಿ ಶಾಸಕರ ಹಸ್ತಕ್ಷೇಪ ಮತ್ತು ಅಭಿವೃದ್ಧಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ತಮಗೆ ಬೇಕಾದ ರೀತಿಯಲ್ಲಿ ಕೆಲಸ ಕಾರ್ಯ ಮಾಡಿಕೊಂಡು ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಆದ್ದರಿಂದ ಹಸ್ತಕ್ಷೇಪ ತಡೆದು ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡದೇ ಇದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.

ಸರ್ಕಾರಿ ನಿಯಮಾವಳಿಯಂತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

ಅಖೀಲಭಾರತ ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಕಾರ್ಯಾಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ, ತಡೋಳಾ ಗ್ರಾಪಂ ಅಧ್ಯಕ್ಷ ಮೈಲಾರಿ ಜೋಗೆ, ಸದಸ್ಯ ಸಿದ್ಧಲಿಂಗ, ಮಹಾವೀರ ಕಾಂಬಳೆ, ಆನಂದರಾಯ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next