Advertisement

ಕೊರೊನಾ ವೈರಸ್‌ ತಡೆಗೆ ಮುಂಜಾಗ್ರತೆ

08:51 PM Mar 18, 2020 | Lakshmi GovindaRaj |

ಸಕಲೇಶಪುರ: ಕೊರಾನಾ ವೈರಸ್‌ ಹರಡದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಿರೀಶ್‌ ಹೇಳಿದರು. ಪಟ್ಟಣದ ಮಿನಿವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಗುರುವಾರ ನಡೆಯುವ ಸಂತೆಯಲ್ಲಿ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

Advertisement

ರಸ್ತೆ ಅಗಲೀಕರಣ ಸಮಸ್ಯೆಗೆ ಪರಿಹಾರ: ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕುರಿತು ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿದೆ. ಮುಖ್ಯ ರಸ್ತೆ ಯಾವಾಗಿನಿಂದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಒಳಪಟ್ಟಿತ್ತು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದರು.

ಎಚ್‌ಆರ್‌ಪಿ ಸಮಸ್ಯೆ ನಿವಾರಣೆ: ಹಿಡುವಳಿ ಭೂಮಿಯನ್ನು ಹೇಮಾವತಿ ಸಂತ್ರಸ್ತರ ಯೋಜನೆ (ಎಚ್‌ಆರ್‌ಪಿ) ವ್ಯಾಪ್ತಿಗೆ ಸೇರಿಸಿರುವ ಕುರಿತು ಮಾಹಿತಿ ಇಲ್ಲ. ಇಂತಹಾ ಪ್ರಕರಣದ ಕುರಿತು ಸಮರ್ಪಕ ಮಾಹಿತಿ ನೀಡಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನೆರೆ ಪರಿಹಾರ ವಿತರಣೆ ಬಹುತೇಕ ಪೂರ್ಣಗೊಂಡಿದ್ದು, ಸಂತ್ರಸ್ತರು ಮನೆ ಕಟ್ಟಿಕೊಳ್ಳಲು ನೆರವು ನೀಡಲಾಗುವುದು ಎಂದರು.

ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ: ಪಟ್ಟಣ ವ್ಯಾಪ್ತಿಯ ಕಸದ ವಿಲೇವಾರಿ ಸಮಸ್ಯೆ ಬಗೆಹರಿಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಆದರೆ ಕೆಲವೊಂದು ಕುಟುಂಬದವರು ತೊಂದರೆ ಕೊಡುತ್ತಿರುವುದರಿಂದ ಸಮಸ್ಯೆ ಪರಿಹರಿಸಲು ಆಗಿಲ್ಲ. ಆದಷ್ಟು ಶೀಘ್ರದಲ್ಲಿ ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದರು.

ತಾಲೂಕಿನಲ್ಲಿ ಅಕ್ರಮ ಮರಳ ಸಾಗಣೆ ತಡೆಗಟ್ಟಲು ಸಂಚಾರ ತನಿಖಾ ದಳ ಆರಂಭಿಸಲಾಗಿದೆ. ಮರಳು ಸಾಗಣೆ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗುತ್ತದೆ ಎಂದರು. ಪುರಸಭೆಯಲ್ಲಿ ಅಕ್ರಮವಾಗಿ ಖಾತೆ ತಿದ್ದಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಗಿರೀಶ್‌, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

Advertisement

ಗ್ರಂಥಾಲಯಕ್ಕೆ ಈ ಹಿಂದೆ ನೀಡಲಾಗಿದ್ದ ಜಾಗವನ್ನೇ ನೀಡಲು ಕ್ರಮ ಕೈಗೊಳ್ಳಲಾಗುವುದು. ಒತ್ತುವರಿಯಾಗಿರುವ ಪತ್ರಕರ್ತರ ಸಂಘದ ಜಾಗವನ್ನು ಬಿಡಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌, ಶಿರಸ್ತೇದಾರ್‌ ಉಮೇಶ್‌ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next