ಉಡುಪಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬಂದಿ ವಿವಿಧೆಡೆ ದಿಢೀರ್ ದಾಳಿ, ತಪಾಸಣೆ ನಡೆಸಿದ್ದಾರೆ.
ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನತೆ ಕಂಡು ಬಂದ ಹಿನ್ನೆಲೆಯಲ್ಲಿ ನಕಲಿ ವೈದ್ಯ ತಡೆ ಹಾಗೂ ಕೆ.ಪಿ.ಎಂ.ಇ. ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿದ್ದಾರೆ.
ಉಡುಪಿ, ಕುಂದಾಪುರ ತಾಲೂಕು ಪ್ರಾಧಿಕಾರ ಮತ್ತು ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಈ ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರು ಈ ಬಗ್ಗೆ ಜಾಗರೂಕತೆ ವಹಿಸಿ ಕೆ.ಪಿ.ಎಂ.ಇ. ಕಾಯ್ದೆ ಅಡಿಯಲ್ಲಿ ನೋಂದಣಿಯಾಗಿರದ ಅಥವಾ ನಕಲಿ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಳ್ಳಬಾರದು.
ನಕಲಿ ವೈದ್ಯರ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ 8277505911, ಕಾರ್ಕಳ 8277505892 ಅಥವಾ ಉಡುಪಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (0820-2525566) ಯನ್ನು ಸಂಪರ್ಕಿಸಬಹುದು.