ಕಾಪು: ಕೊರೊನಾ ವೈರಸ್ ಹರಡದಂತೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದು ಕೊಳ್ಳಲಾಗಿದೆ. ಯಾವುದೇ ಜಾತ್ರೆ, ಉತ್ಸವವನ್ನು ತಡೆಯುವ ಉದ್ದೇಶ ಸರಕಾರಕ್ಕಿಲ್ಲ. ಆದರೆ ಜನಜಂಗುಳಿ ಹೆಚ್ಚಿ ದಾಗ ಸೋಂಕು ವೇಗವಾಗಿ ಪಸರಿ ಸುವುದರಿಂದ ಸರಳವಾಗಿ ನಡೆಸು ವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಪುವಿನಲ್ಲಿ ರವಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜನಸಂದಣಿ ಉಂಟಾಗುವುದನ್ನು ತಡೆಯುವುದರಿಂದ ಕೊರೊನಾ ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಸದಸ್ಯರಾದ ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್, ಸದಸ್ಯರಾದ ಕೇಶವ ಮೊಲಿ, ಶಶಿಪ್ರಭಾ ಶೆಟ್ಟಿ, ಬಿಜೆಪಿ ಮುಖಂಡರಾದ ಸುರೇಶ್ ಶೆಟ್ಟಿ ಗುರ್ಮೆ, ಶ್ರೀಕಾಂತ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು.
ಸಪ್ತಪದಿ ಸಾಮೂಹಿಕ ವಿವಾಹ
3 ಸಾವಿರಕ್ಕೂ ಅಧಿಕ ಜೋಡಿಗಳಿಂದ ಅರ್ಜಿ
“ಸಪ್ತಪದಿ’ ಸಾಮೂಹಿಕ ವಿವಾಹಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 3 ಸಾವಿರಕ್ಕೂ ಅಧಿಕ ಜೋಡಿಗಳು ಅರ್ಜಿ ಸಲ್ಲಿಸಿವೆ. ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಚಿವ ಕೋಟ ತಿಳಿಸಿದರು.
“ಎ’ ದರ್ಜೆಯ ದೇವಸ್ಥಾನಗಳ ಮೂಲಕ ವಿವಾಹಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತ¤ದೆ. “ಎ’ ದರ್ಜೆ ದೇವಸ್ಥಾನಗಳಿಲ್ಲದ ಜಿಲ್ಲೆಗಳಲ್ಲಿ ಇಲಾಖೆಯ ಸಾಮಾನ್ಯ ಸಂಗ್ರಹ ನಿಧಿಯಿಂದ ಹಣ ಬಿಡುಗಡೆ ಮಾಡಿ ಸಾಮೂಹಿಕ ವಿವಾಹಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.