Advertisement

ಕೊರೊನಾ ವೈರಸ್ ಭೀತಿ: ದುಬೈ ವಿಮಾನ ನಿಲ್ದಾಣಗಳಲ್ಲಿ ಬಿಗಿ ತಪಾಸಣೆ

10:42 PM Mar 20, 2020 | Sriram |

ದುಬೈ: ಇಲ್ಲಿನ ಆರೋಗ್ಯ ಇಲಾಖೆ ಕೊರೊನಾ ಹರಡದಂತೆ ಎಚ್ಚರ ವಹಿಸಿದೆ. ಅಲ್ಲಿನ ಸಾರ್ವಜನಿಕ ಸ್ಥಳಗಳು ಸೇರಿದಂತೆ ಇತರ ಕಡೆಗಳಲ್ಲಿ ತೀವ್ರ ತನಿಖೆಗೆ ಒಳಪಡಿಸಿದೆ. ಇಲ್ಲಿ ಅಂತಾರಾಷ್ಟ್ರೀಯ ಮತ್ತು ಒಳನಾಡಿನ ವಿಮಾನ ನಿಲ್ದಾಣಗಳಲ್ಲಿ ಬಿಗಿ ತಪಾಸಣೆ ನಡೆದಿವೆ.

Advertisement

ವಿಮಾನ ನಿಲ್ದಾಣಗಳಲ್ಲಿ ಥರ್ಮಲ್‌ ಕೆಮರಾಗಳನ್ನು ಅಳವಡಿಸಲಾಗಿದ್ದು, ಯಾರೂ ಕೂಡ ಕಣ್ತಪ್ಪಿಸಿ ತಪಾಸಣೆಯಿಂದ ಹೊರ ಹೋಗಲು ಸಾಧ್ಯವಿಲ್ಲ. ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ಬಹಳ ಸೂಕ್ಷ್ಮವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಎಲ್ಲಾ ತನಿಖಾ ಪ್ರಕ್ರಿಯೆಯು 45 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಥರ್ಮಲ್‌ ಕ್ಯಾಮೆರಾಗಳನ್ನು ಸಭಾಂಗಣದ ಆಯಕಟ್ಟಿನ ಸ್ಥಳಗಳಲ್ಲಿ ಇರಿಸಲಾಗಿದೆ. ಮೂಗಿನ ಸ್ಕ್ಯಾನ್‌ಗಳನ್ನು ನಡೆಸಲಾಗುತ್ತದೆ. ವಯಸ್ಕರು ಮತ್ತು ಮಕ್ಕಳಿಗಾಗಿರುವ ಎಲ್ಲಾ ಪ್ರಕ್ರಿಯೆಗಳು ಒಂದೇ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next