Advertisement

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

03:23 AM Oct 20, 2024 | Team Udayavani |

ಪುತ್ತೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್‌ ಚೋಲ್‌ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ.

Advertisement

ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆ ಸ್ಥಿರವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next