ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮಂಗಳವಾರವೂ(ಜೂನ್ 22) ಹೆಚ್ಚಳವಾಗಿದ್ದು, ಇದರೊಂದಿಗೆ ತೈಲ ಬೆಲೆ ಮತ್ತಷ್ಟು ಹೆಚ್ಚಳವಾಗುವ ಮೂಲಕ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದೆ. ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 28ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26ಪೈಸೆ ಏರಿಕೆಯಾಗಿದೆ.
ಇದನ್ನೂ ಓದಿ:ಮೇಡ್ ಇನ್ ಇಂಡಿಯಾ ನಿಸ್ಸಾನ್ ಎಸ್ ಯುವಿ ಮ್ಯಾಗ್ನೈಟ್ ಭಾರತದಿಂದ ಮೂರು ದೇಶಕ್ಕೆ ರಫ್ತು
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.82 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 93.54ರೂಪಾಯಿಗೆ ಹೆಚ್ಚಳವಾಗಿದೆ. ಮುಂಬಯಿಯಲ್ಲಿ ಪೆಟ್ರೋಲ್ ಲೀಟರ್ ಗೆ 103.63 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 95.72 ರೂಪಾಯಿಗೆ ಹೆಚ್ಚಳವಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ ಲೀಟರ್ ಗೆ 93.54 ರೂಪಾಯಿಗೆ ಮಾರಾಟವಾಗುತ್ತಿರುವುದಾಗಿ ವರದಿ ತಿಳಿಸಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 97.50 ರೂಪಾಯಿ ಆಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 88.23 ರೂಪಾಯಿಗೆ ಮಾರಾಟವಾಗುತ್ತಿದೆ.
ಸರ್ಕಾರಿ ಸ್ವಾಮ್ಯದ ಇಂಧನ ಮಾರಾಟಗಾರರು ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುವ ಮೂಲಕ ಹೆಚ್ಚಿಸುತ್ತಿದ್ದು, ಇದರಿಂದ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದು, ಡೀಸೆಲ್ ಬೆಲೆಯೂ ನೂರು ರೂಪಾಯಿ ಗಡಿ ತಲುಪುತ್ತಿದೆ ಎಂದು ವರದಿ ತಿಳಿಸಿದೆ.