Advertisement

ಬೆಲೆ ಏರಿಕೆ ನಡುವೆಯೂ ಖರೀದಿ ಭರಾಟೆ

01:54 PM Aug 22, 2020 | Suhan S |

ತುಮಕೂರು: ಕೋವಿಡ್ ಸಂಕಷ್ಟ ಬೆಲೆ ಏರಿಕೆಯ ನಡುವೆಯೂ ಕಲ್ಪತರು ನಾಡಿನ ಎಲ್ಲಾ ಕಡೆ ಗೌರಿ ಗಣೇಶ ಹಬ್ಬವನ್ನು ಸಡಗರ ಸಂಭ್ರಮ ದಿಂದ ಆಚರಿಸಲು ಸಿದ್ಧತೆ ನಡೆದಿದ್ದು ಶುಕ್ರವಾರ ಗೌರಿಯನ್ನು ಮನೆ ಮನೆಗಳಲ್ಲಿ ಗೌರಿಗೆ ಬಾಗಿನ ಅರ್ಪಿಸುವ ಮೂಲಕ ಆಚರಿಸಿದರು.

Advertisement

ಶುಕ್ರವಾರ ಗೌರಿ ಹಬ್ಬದ ಸಂಭ್ರಮ ಜಿಲ್ಲೆಯಲ್ಲಿ ಕಂಡು ಬಂದಿತು ಮನೆ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಬಗೆ ಬಗೆಯ ಸಿಹಿ ತಿನಿಸುಗಳನ್ನು ಮಾಡಿ ಹಬ್ಬ ಆಚರಿಸಿದರು ಜೊತೆಗೆ ಮನೆ ಮನೆಗಳಲ್ಲಿ ಗೌರಿ ಪೂಜೆ ಮಾಡಿ ಬಾಗಿನ ಅರ್ಪಿಸಿದರು. ಗಣೇಶ ಹಬ್ಬಕ್ಕೆ ಸಿದ್ಧತೆ:ಜಿಲ್ಲೆಯ ಎಲ್ಲಾ ಕಡೆ ಗಣೇಶ ಹಬ್ಬಕ್ಕಾಗಿ ಸಿದ್ಧತೆ ಬರದಿಂದ ನಡೆದಿದೆ. ನಗರದ ಎಲ್ಲಾ ಕಡೆ ಗಣೇಶ ವಿಗ್ರಹ ಮಾರಾಟಕ್ಕೆ ಅವಕಾಶ ನೀಡದೇ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಂಡು ಗಣೇಶ ವಿಗ್ರಹಗಳನ್ನು ಮಾರಾಟ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಜನರು ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಗಣೇಶ ವಿಗ್ರಹಗಳನ್ನು ಖರೀದಿಮಾಡುತ್ತಿದ್ದರು.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಾರ್ಡ್‌ ನಂ.30, ಟಿ.ಪಿ.ಕೈಲಾಸಂ ಮುಖ್ಯ ರಸ್ತೆಯಲ್ಲಿರುವ ಗಾರೆ ನರಸಯ್ಯನ ಕಟ್ಟೆಯಲ್ಲಿ ದೊಡ್ಡ ಗಣೇಶ ಮೂರ್ತಿಗಳ(ಕ್ರೇನ್‌ ವ್ಯವಸ್ಥೆ ಮಾಡಲಾಗಿದೆ)ಹಾಗೂ ವಿದ್ಯಾನಗರದಲ್ಲಿರುವ ಪಂಪ್‌ಹೌಸ್‌ನಲ್ಲಿ ಚಿಕ್ಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ರೀತಿ ಆ.22ರಂದು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಚಿಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ನೀರಿನ ಟ್ಯಾಂಕರ್‌ಗಳನ್ನು ಹೊಂದಿರುವ ವಾಹನಗಳು ಬಟವಾಡಿ ಆಂಜನೇಯ ದೇವಸ್ಥಾನದ ಹತ್ತಿರ, ಶೆಟ್ಟಿಹಳ್ಳಿ ರಸ್ತೆಯ ರಾಘವೇಂದ್ರ ಸ್ವಾಮಿ ಮಠದ ಬಳಿ, ಮಹಾನಗರಪಾಲಿಕೆ ಕಚೇರಿ ಆವರಣ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ, ಅಗ್ರಹಾರದ ಶಿಶುವಿಹಾರದ ಹತ್ತಿರ(7ನೇ ವಾರ್ಡ್‌), ಕ್ಯಾತ್ಸಂದ್ರ ಬಸ್‌ ನಿಲ್ದಾಣದ ಹತ್ತಿರ ಹಾಗೂ ಶಿರಾಗೇಟ್‌ ಕನಕವೃತ್ತದ ಹತ್ತಿರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next