Advertisement

ಅಯೋಧ್ಯೆ ಭೂಮಿ ಪೂಜೆ ಸಿದ್ಧತೆ; ಪುರೋಹಿತ, 14 ಮಂದಿ ಪೊಲೀಸರಿಗೆ ಕೋವಿಡ್ 19 ದೃಢ

04:14 PM Jul 30, 2020 | Nagendra Trasi |

ಲಕ್ನೋ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಒಂದೆಡೆ ಸಿದ್ದತೆ ನಡೆಯುತ್ತಿದ್ದು, ಮತ್ತೊಂದೆಡೆ ಅಯೋಧ್ಯೆಯಲ್ಲಿ ಕರ್ತವ್ಯ ನಿರತ 14 ಪೊಲೀಸರು ಹಾಗೂ ಪುರೋಹಿತರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.

Advertisement

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನೆರವೇರಲಿರುವ ಭೂಮಿ ಪೂಜೆ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪುರೋಹಿತರು ಕರ್ತವ್ಯ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ 50 ಮಂದಿ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವರದಿ ವಿವರಿಸಿದೆ.

ಸಹಾಯಕ ಮುಖ್ಯ ಪುರೋಹಿತ ಪ್ರದೀಪ್ ದಾಸ್ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಅಲ್ಲದೇ ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಪುರೋಹಿತ ಸತ್ಯೇಂದ್ರ ದಾಸ್ ಸೇರಿದಂತೆ ನಾಲ್ವರನ್ನು ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದಾಸ್ ಜತೆ ನಿಕಟ ಸಂಪರ್ಕದಲ್ಲಿದ್ದ 12 ಮಂದಿ ಪುರೋಹಿತರ ವರದಿಯೂ ನೆಗೆಟಿವ್ ಬಂದಿದೆ ಎಂದು ವರದಿ ತಿಳಿಸಿದೆ.

ರಾಮಜನ್ಮಭೂಮಿ ಕಾಂಪ್ಲೆಕ್ಸ್ ನಲ್ಲಿ ಭದ್ರತಾ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಕೋವಿಡ್ 19 ಸೋಂಕು ಇದ್ದಿರುವುದು ದೃಢವಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ಆಗಸ್ಟ್ 5ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದ ಪೂರ್ವ ಸಿದ್ಧತೆ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಜನ್ಮಭೂಮಿ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next