Advertisement

ಶಿಕ್ಷಕರಿಗೂ ಇನ್ನು ಮನೆಗೆಲಸ ; ಜು.31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ

12:51 AM Jul 17, 2020 | Hari Prasad |

ಬೆಂಗಳೂರು: ಕೋವಿಡ್ 19 ಸೋಂಕು ತೀವ್ರವಾಗಿರುವುದರಿಂದ ಮುಂಜಾಗ್ರತೆಯ ಕ್ರಮವಾಗಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಜು.31ರ ವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Advertisement

ಎಸೆಸೆಲ್ಸಿ ಮೌಲ್ಯಮಾಪನಕ್ಕೆ ಮತ್ತು ಕೋವಿಡ್ 19 ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬಂದಿ ಹೊರತು ಪಡಿಸಿ ಉಳಿದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಈ ಬಗ್ಗೆ ಸುತ್ತೋಲೆಯಲ್ಲಿ ಇಲಾಖೆ ತಿಳಿಸಿದೆ.

ಈ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುವುದು. ಶಿಕ್ಷಕರು ಮತ್ತು ಸಿಬಂದಿ ವರ್ಗದವರನ್ನು ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ಅವರ ದೂರವಾಣಿ ಮತ್ತು ಇ-ಮೇಲ್‌ ವಿಳಾಸವನ್ನು ಪಡೆದುಕೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.

ಆರೋಗ್ಯ ಸೇತು ಆ್ಯಪ್‌ ಅಳವಡಿಸಿ
ಎಲ್ಲ ಶಿಕ್ಷಕರು ಮತ್ತು ಬೋಧಕೇತರ ವರ್ಗ ತಮ್ಮ ಮೊಬೈಲ್‌ಗ‌ಳಲ್ಲಿ ಆರೋಗ್ಯ ಸೇತು ಆ್ಯಪ್‌ ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ
ಈ ಅವಧಿಯಲ್ಲಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗುವಂತಿಲ್ಲ. ಅಲ್ಲದೆ ಸೇವೆ ಅಗತ್ಯಬಿದ್ದಾಗ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಮಾಡಿ ಕೆಲಸಕ್ಕೆ ಹಾಜರಾಗುವಂತೆ ಇಲಾಖೆ ತಿಳಿಸಿದೆ.

Advertisement

ಆನ್‌ಲೈನ್‌ ತರಗತಿಗಳನ್ನು ನಡೆಸಿದಲ್ಲಿ ಶಿಕ್ಷಕರು ಮನೆಯಿಂದಲೇ ಭಾಗವಹಿಸಬೇಕು. ಇಲಾಖೆಗೂ ಆನ್‌ಲೈನ್‌ ತರಗತಿ ನಡೆಸುವ ಆಲೋಚನೆ ಇದ್ದು, ಅಂತಹ ಸಂದರ್ಭದಲ್ಲಿ ಕರ್ತವ್ಯಗಳನ್ನು ಪಾಲಿಸಬೇಕು ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next