ಬೆಂಗಳೂರು: ಜಲ್ ಜೀವನ್ ಮಿಷನ್ ಯೋಜನೆಯಡಿ 600 ಕೋಟಿ ರೂ. ಅನುದಾನ ಹಾಗೂ 38 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 397 ಕೋ. ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
Advertisement
ರಾಜೀವ್‌ಗಾಂಧಿ ವಿವಿ ಕ್ಯಾಂಪಸ್ : ಒಪ್ಪಿಗೆ ರಾಮನಗರದ ಅರ್ಚಕರ ಹಳ್ಳಿಯಲ್ಲಿ ರಾಜೀವ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲ ಯದ ಕ್ಯಾಂಪಸ್ ಹಾಗೂ ಇತರ ಪೂರಕ ಕಟ್ಟಡಗಳನ್ನು 600 ಕೋ.ರೂ.ವೆಚ್ಚದಲ್ಲಿ ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದಿಂದ ನಿರ್ಮಿಸಲು ಆಡಳಿತಾತ್ಮಕ ಅನುಮೊದನೆ ನೀಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.