ಆಂಧ್ರಪ್ರದೇಶ: ಆಂಧ್ರಪ್ರದೇಶದ ಸೀತಮ್ಮಧಾರದಲ್ಲಿರುವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಕೆಟ್ಟ ನಡತೆಯ ಆರೋಪದ ಮೇಲೆ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳನ್ನು ಶಾಲೆಯ ಆವರಣದ ಹೊರಗಿನ ರಸ್ತೆಯಲ್ಲಿ ಸುಡು ಬಿಸಿಲಿದ್ದರೂ ಬರಿಗಾಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಶಾಲಾ ಮಕ್ಕಳು ಮಧ್ಯಾಹ್ನ ಬರಿಗಾಲಿನಲ್ಲಿ ರಸ್ತೆಯಲ್ಲಿ ನಿಂತಿದ್ದನ್ನು ಕಂಡು ಮಕ್ಕಳನ್ನು ಯಾಕೆ ಬರಿಗಾಲಿನಲ್ಲಿ ಬಿಸಿಲಿಗೆ ನಿಲ್ಲಿಸಿದ್ದೀರಿ ಎಂದು ಶಿಕ್ಷಕಿಯನ್ನು ಪ್ರಶ್ನೆ ಮಾಡಿದ್ದಾರೆ ಆದರೆ ಇದಕ್ಕೆ ಉತ್ತರಿಸಿದ ಶಿಕ್ಷಕಿ ನಮ್ಮ ಮಕ್ಕಳಿಗೆ ನಾವು ಶಿಕ್ಷೆ ನೀಡುತ್ತಿದ್ದೇವೆ ಅದನ್ನು ಪ್ರಶ್ನಿಸಲು ನೀವು ಯಾರು ಎಂದು ಕಿಡಿಕಾರಿದ್ದಾರೆ, ಈ ವೇಳೆ ಆ ವ್ಯಕ್ತಿ ಅಲ್ಲಿನ ಮಕ್ಕಳು ಬಿಸಿಲಿನಲ್ಲಿ ನಿಂತಿರುವ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ ಅಲ್ಲದೆ ಇಂತಹ ಕೃತ್ಯ ಎಸಗುವ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಂದಿಸಬೇಕೆಂದು ಹಲವರು ಆಗ್ರಹಿಸುತ್ತಿದ್ದಾರೆ.
ಇತ್ತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರು ಬಂದ ಹಿನ್ನೆಲೆಯಲ್ಲಿ ಡಿಇಒ ಶಾಲೆಗೆ ದೌಡಾಯಿಸಿದ್ದಾರೆ.
ಇದನ್ನೂ ಓದಿ: ಮನೆಯ ಕೊಠಡಿಯಲ್ಲೇ ನವ ದಂಪತಿಗಳು ಶವವಾಗಿ ಪತ್ತೆ: ಅರತಕ್ಷತೆಗೂ ಮುನ್ನವೇ ನಡೆಯಿತು ಘೋರ ದುರಂತ